ಕೋಟಾ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣ: ತಡೆಗೆ ಸಮಿತಿ ರಚಿಸಿದ ಸಿಎಂ ಗೆಹ್ಲೋಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜಸ್ಥಾನದ ಕೋಟಾದಲ್ಲಿ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಸಾವಿನ ಬಗ್ಗೆ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕಳವಳ ವ್ಯಕ್ತಪಡಿಸಿದ್ದು, ವಿದ್ಯಾರ್ಥಿಗಳ ಸಾವು ತಡೆಯಲು ಸಮಿತಿ ರಚಿಸಲಾಗಿದೆ. ಸಮಿತಿಗೆ 15 ದಿನಗಳಲ್ಲಿ ವರದಿ ನೀಡುವಂತೆ ಸೂಚಿಸಲಾಗಿದೆ.

ಕೋಚಿಂಗ್ ಹಬ್‌ನಲ್ಲಿ ಐಐಟಿ ಮತ್ತು ನೀಟ್ ಆಕಾಂಕ್ಷಿಗಳ ಆತ್ಮಹತ್ಯೆ ಪ್ರಕರಣಗಳ ಕುರಿತು ಸಿಎಂಎ ಪರಿಶೀಲನಾ ಸಭೆ ನಡೆಸಿದರು. ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿಗಳು 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳ ಮೇಲೆ ಸಾಕಷ್ಟು ಹೊರೆ ಬೀಳುತ್ತಿದೆ. 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳನ್ನು ಕೋಚಿಂಗ್ ಸಂಸ್ಥೆಗಳಿಗೆ ಸೇರಿಸುವ ಮೂಲಕ ಪಾಲಕರು ತಮ್ಮ ಮಕ್ಕಳಿಗೆ ಪರೋಕ್ಷವಾಗಿ ಹಿಂಸೆ ಕೊಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳು ಬೋರ್ಡ್ ಪರೀಕ್ಷೆಗಳನ್ನು ಪಾಸಾಗುವುದರ ಜೊತೆಗೆ ಪ್ರವೇಶ ಪರೀಕ್ಷೆಗೆ ತಯಾರಿ ನಡೆಸುವುದೇ ಹೊರೆಯಾಗುತ್ತಿದೆ. ಒಬ್ಬರು ಸತ್ತರೂ ಪೋಷಕರಿಗೆ ಆಗುವ ನಷ್ಟ ಭರಿಸಲಾಗದು ಎಂದು ಮುಖ್ಯಮಂತ್ರಿ ಹೇಳಿದರು.

ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗಳ ಪ್ರತಿನಿಧಿಗಳು, ಎಲ್ಲಾ ವರ್ಗದ ಪೋಷಕರು ಮತ್ತು ವೈದ್ಯರನ್ನು ಒಳಗೊಂಡ ಸಮಿತಿಯನ್ನು ರಚಿಸಲಾಗಿದೆ. ಸಮಿತಿಯು ತನ್ನ ವರದಿಯನ್ನು 15 ದಿನಗಳಲ್ಲಿ ಸಲ್ಲಿಸಲಿದೆ. ಕೋಟಾದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದವರಲ್ಲಿ ಈ ವರ್ಷ 22 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ವರ್ಷ 15 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಈ ವರ್ಷ ಈ ಸಂಖ್ಯೆ 22ಕ್ಕೆ ತಲುಪಿದೆ.

ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗಳು ಹಣ ಮಾಡುವ ಯಂತ್ರಗಳಾಗಬೇಡಿ. ಇದು ರಾಜಸ್ಥಾನದ ಸಮಸ್ಯೆ ಮಾತ್ರವಲ್ಲ, ಇಡೀ ದೇಶದ ಸಮಸ್ಯೆ ಎಂದು ಮುಖ್ಯಮಂತ್ರಿ ಹೇಳಿದರು. ವಿದ್ಯಾರ್ಥಿಗಳ ಆತ್ಮಹತ್ಯೆ ಕುರಿತ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ದತ್ತಾಂಶವನ್ನು ಸಭೆಯಲ್ಲಿ ಚರ್ಚಿಸಲಾಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!