ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಸಿದ್ದರಾಮಯ್ಯ ಅವರು ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ಕ್ಷೇತ್ರ ಮರುವಿಂಗಡಣೆ ಕುರಿತು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಸಂಸದ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.
ಸಿದ್ದರಾಮಯ್ಯ ಅವರು ತಾವು ಮುಖ್ಯಮಂತ್ರಿಯಾಗಿ ವಿಫಲರಾಗಿರುವುದನ್ನು ಮುಚ್ಚಿಕೊಳ್ಳಲು ತಪ್ಪು ಹುಡುಕುವ ಕೆಲಸ ಮಾಡುತ್ತಿದ್ದಾರೆ. ಕರ್ನಾಟಕ ದಿವಾಳಿ ಅಂಚಿನಲ್ಲಿದ್ದು, ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಭ್ರಷ್ಟಾಚಾರ ತಾಂಡವ ಆಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.