September 22, 2026
Tuesday, September 22, 2026
spot_img

ತಮಿಳುನಾಡಿನಲ್ಲಿ ಮದ್ಯಪಾನ ನಿಯಂತ್ರಣಕ್ಕೆ ಸಿಎಂ ಜೋಸೆಫ್ ವಿಜಯ್ ಮಾಸ್ಟರ್ ಪ್ಲಾನ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಜೋಸೆಫ್ ವಿಜಯ್ ಅವರು ರಾಜ್ಯದ ಸಾರ್ವಜನಿಕ ಹಿತದೃಷ್ಟಿಯಿಂದ ಕಠಿಣ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಮದ್ಯಪಾನದ ಹಾವಳಿಯನ್ನು ತಡೆಗಟ್ಟಲು ಮತ್ತು ಯುವಜನತೆಯನ್ನು ದುಶ್ಚಟಗಳಿಂದ ದೂರವಿಡಲು ವಿಜಯ್ ಸರ್ಕಾರ ಈಗ ಹೊಸ ಮದ್ಯ ನೀತಿಯನ್ನು ಜಾರಿಗೆ ತಂದಿದೆ.

ಸರ್ಕಾರದ ಹೊಸ ಆದೇಶದ ಪ್ರಕಾರ, ಇನ್ನು ಮುಂದೆ ತಮಿಳುನಾಡಿನಲ್ಲಿ ಮದ್ಯ ಖರೀದಿ ಅಥವಾ ಮಾರಾಟ ಮಾಡಲು ಕನಿಷ್ಠ 21 ವರ್ಷ ತುಂಬಿರಲೇಬೇಕು. ಒಂದು ವೇಳೆ ಗ್ರಾಹಕರ ವಯಸ್ಸಿನ ಬಗ್ಗೆ ಅನುಮಾನ ಬಂದಲ್ಲಿ, ಮದ್ಯದಂಗಡಿಯ ಸಿಬ್ಬಂದಿಗಳು ಆಧಾರ್ ಕಾರ್ಡ್ ಸೇರಿದಂತೆ ಅಧಿಕೃತ ಗುರುತಿನ ಚೀಟಿಗಳನ್ನು ಕಡ್ಡಾಯವಾಗಿ ಪರಿಶೀಲಿಸಬೇಕು ಎಂದು ಸೂಚಿಸಲಾಗಿದೆ.

ನಿಯಮ ಉಲ್ಲಂಘಿಸುವ ಮಾರಾಟಗಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಎಚ್ಚರಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !