ಸಿಎಂ ಕೇಜ್ರಿವಾಲ್ ಸರಕಾರಕ್ಕೆ ಶಾಕ್ ಕೊಟ್ಟ ಇಡಿ: ಆರೋಗ್ಯ ಸಚಿವನ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದೆಹಲಿಯಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರದ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿಸಿದ್ದಾರೆ.
ಕಳೆದ 2015-16ನೇ ಸಾಲಿನಲ್ಲಿ ಕೋಲ್ಕತ್ತಾ ಮೂಲದ ಸಂಸ್ಥೆಯೊಂದಿಗೆ ಹವಾಲಾ ವ್ಯವಹಾರದಲ್ಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಭಾಗಿಯಾಗಿರುವ ಬಗ್ಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಆರೋಪಿಸಿದ್ದಾರೆ.
ಆಮ್ ಆದ್ಮಿ ಪಕ್ಷದ ನಾಯಕ ಮತ್ತು ಅವರ ಕುಟುಂಬದ ಒಡೆತನದಲ್ಲಿ ಇರುವ ಒಟ್ಟು 4.81 ಕೋಟಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡ ಸುಮಾರು ಎರಡು ತಿಂಗಳ ನಂತರದಲ್ಲಿ ಈ ಬಂಧನವನ್ನು ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!