ತಿಹಾರ್​ ಜೈಲಿಗೆ ತೆರಳುವ ಮುನ್ನ ರಾಜ್​ಘಾಟ್​​, ಹನುಮಾನ್​ ದೇವಸ್ಥಾನಕ್ಕೆ ಸಿಎಂ ಕೇಜ್ರಿವಾಲ್​ ಭೇಟಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆಮ್ ಆದ್ಮಿ ಪಕ್ಷದ ಮುಖ್ಯಸ್ಥ , ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ (ಜೂನ್​​​ 2) ತಿಹಾರ್ ಜೈಲಿಗೆ ಮರಳಲಿದ್ದಾರೆ.

ಲೋಕಸಭೆ ಚುನಾವಣೆ ಪ್ರಚಾರಕ್ಕಾಗಿ ಸುಪ್ರೀಂಕೋರ್ಟ್ ನೀಡಿದ್ದ ಮಧ್ಯಂತರ ಜಾಮೀನಿನ ಮೇಲೆ ಕೇಜ್ರಿವಾಲ್ ಮೇ 10ರಂದು ಜೈಲಿನಿಂದ ಬಿಡುಗಡೆಯಾಗಿದ್ದರು. ಜೊತೆಗೆ ಜೂನ್ 2ರಂದು ತಿಹಾರ್ ಜೈಲು ಅಧೀಕ್ಷಕರ ಮುಂದೆ ಶರಣಾಗುವಂತೆ ಸೂಚಿಸಿತ್ತು.

ಇದೀಗ ಸರ್ವೋಚ್ಚ ನ್ಯಾಯಾಲಯದ ಆದೇಶದ ಮೇರೆಗೆ ನಾನು 21 ದಿನಗಳ ಕಾಲ ಚುನಾವಣಾ ಪ್ರಚಾರಕ್ಕೆ ಬಂದಿದ್ದೇನೆ. ಗೌರವಾನ್ವಿತ ಸುಪ್ರೀಂ ಕೋರ್ಟ್‌ಗೆ ಕೃತಜ್ಞನಾಗಿದ್ದೇನೆ. ಇಂದು ತಿಹಾರ್​ ಜೈಲಿಗೆ ಶರಣಾಗುತ್ತೇನೆ. ಮಧ್ಯಾಹ್ನ 3 ಗಂಟೆಗೆ ಮನೆಯಿಂದ ಹೊರಡುತ್ತೇನೆ. ತಿಹಾರ್​ಗೆ ಹೋಗುವ ಮೊದಲು ರಾಜ್‌ಘಾಟ್‌ಗೆ ತೆರಳಿ ಮಹಾತ್ಮಗಾಂಧಿ ಅವರಿಗೆ ನಮನ ಸಲ್ಲಿಸುತ್ತೇನೆ. ಅಲ್ಲಿಂದ ಕನ್ನಾಟ್ ಪ್ಲೇಸ್‌ನಲ್ಲಿರುವ ಹನುಮಾನ್ ದೇವಸ್ಥಾನಕ್ಕೆ ಹೋಗಿ ಹನುಮಾನ್ ಜಿಯವರ ಆಶೀರ್ವಾದ ಪಡೆಯುತ್ತೇನೆ. ಅಲ್ಲಿಂದ ಪಕ್ಷದ ಕಚೇರಿಗೆ ತೆರಳಿ ಎಲ್ಲ ಕಾರ್ಯಕರ್ತರು ಹಾಗೂ ಪಕ್ಷದ ಮುಖಂಡರನ್ನು ಭೇಟಿ ಮಾಡುತ್ತೇನೆ ಎಂದು ಸಿಎಂ ಅರವಿಂದ್​ ಕೇಜ್ರಿವಾಲ್​ ತಮ್ಮ ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಮಾಡಿದ್ದಾರೆ.

ತಮ್ಮ ಆರೋಗ್ಯ ಸ್ಥಿತಿ ಹದಗೆಟ್ಟಿರುವ ಕಾರಣದಿಂದ ಮಧ್ಯಂತರ ಜಾಮೀನಿನ ಅವಧಿಯನ್ನು 7 ದಿನಗಳ ಕಾಲ ವಿಸ್ತರಿಸುವಂತೆ ಕೋರಿ ಕೇಜ್ರಿವಾಲ್​ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಸುಪ್ರೀಂಕೋರ್ಟ್​​ ಕಚೇರಿಯು ಅವರ ಮನವಿಯನ್ನು ಸ್ವೀಕರಿಸಲು ನಿರಾಕರಿಸಿ, ನಿಯಮಿತ ಜಾಮೀನು ಕೋರಿ ವಿಚಾರಣಾ ನ್ಯಾಯಾಲಯ್ಕಕೆ ತೆರಳಲು ಅವರಿಗೆ ಸ್ವಾತಂತ್ರ್ಯವಿದೆ ಎಂದು ಹೇಳಿತ್ತು. ನಂತರ ಸಿಎಂ ಕೇಜ್ರಿವಾಲ್​ ಅವರು ದೆಹಲಿ ನ್ಯಾಯಾಲಯದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.

ಬಳಿಕ ದೆಹಲಿಯ ರೂಸ್ ಹೌಸ್ ನ್ಯಾಯಾಲಯದಲ್ಲಿ ಸಾಮಾನ್ಯ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ವೈದ್ಯಕೀಯ ಕಾರಣಗಳಿಂದಾಗಿ ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಲಾಗಿದೆಯೇ ಹೊರತು ಎಸ್‌ಸಿ ನೀಡಿದ ಮಧ್ಯಂತರ ಜಾಮೀನಿನ ವಿಸ್ತರಣೆಗಾಗಿ ಅಲ್ಲ ಎಂದು ಗಮನಿಸಿದ ನ್ಯಾಯಾಲಯವು ಅರ್ಜಿಯ ಆದೇಶವನ್ನು ಜೂನ್ 5ಕ್ಕೆ ಮುಂದೂಡಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

1 COMMENT

  1. ಹೊಸ ದಿಗಂತ ಪತ್ರಿಕೆಯಲ್ಲಿ ನೈಜವಾದ ಪ್ರಚಲಿತ ವಿದ್ಯಮಾನ ನೇರವಾಗಿ ಸರಳವಾಗಿ ಓದುಗರು ಇಷ್ಟ ಪಡುವರೀತಿ ವರದಿ ಲೇಖನಗಳು ಇವೆ, ನನಗೆ ಇದು ತುಂಬಾ ಇಷ್ಟವಾಗಿದೆ

LEAVE A REPLY

Please enter your comment!
Please enter your name here

error: Content is protected !!