ಆರೋಗ್ಯ ಇಲಾಖೆಯ 262 ಹೊಸ ಆ್ಯಂಬುಲೆನ್ಸ್‌ ಸೇವೆಗಳಿಗೆ ಚಾಲನೆ ನೀಡಿದ ಸಿಎಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದ ಆರೋಗ್ಯ ಇಲಾಖೆಯ ನೂತನ 262 ಆ್ಯಂಬುಲೆನ್ಸ್‌ ಸೇವೆಗಳಿಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.

ಕಲ್ಯಾಣ ಇಲಾಖೆ ವಿಧಾನಸೌಧದ ಆವರಣದಲ್ಲಿ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ 82.02 ಕೋಟಿ ರೂ. ವೆಚ್ಚದ 262 ಆಧುನಿಕ ಜೀವ ರಕ್ಷಕ ಆ್ಯಂಬುಲೆನ್ಸ್‌ ಗಳನ್ನು ಜನಸೇವೆಗಾಗಿ ಲೋಕಾರ್ಪಣೆ ಮಾಡಿದರು. ಬಳಿಕ ಮಾತನಾಡಿದ ಅವರು, ಜಯದೇವ ಆಸ್ಪತ್ರೆಯಲ್ಲಿರುವ ಗುಣಮಟ್ಟದ ಆರೋಗ್ಯ ಸೇವೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಸಿಗಬೇಕು ಎನ್ನುವುದು ನಮ್ಮ ಸರ್ಕಾರದ ಗುರಿ ಎಂದರು.

ನಾಡಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ದವಾಗಿದೆ. ಚಿಕಿತ್ಸೆ ಸಿಗದೆ ಯಾರೂ ಪ್ರಾಣ ಕಳೆದುಕೊಳ್ಳುವಂಥಾಗಬಾರದು ಎನ್ನುವ ಕಾರಣಕ್ಕೇ ತುರ್ತು 108 ಆ್ಯಂಬುಲೆನ್ಸ್‌ ಗಳನ್ನು ಆರೋಗ್ಯ ಸೇವೆಗೆ ಒದಗಿಸಲಾಗಿದೆ. ರಾಜ್ಯದಲ್ಲಿ 840ಕ್ಕೂ ಹೆಚ್ಚು ಆ್ಯಂಬುಲೆನ್ಸ್‌ಗಳ ಅಗತ್ಯವಿದೆ. ಪ್ರತೀ ತಾಲ್ಲೂಕಿನಲ್ಲಿ 4 ಆ್ಯಂಬುಲೆನ್ಸ್‌ಗಳು ಕಾರ್ಯನಿರ್ವಹಿಸುತ್ತಾ ಪ್ರತೀ ದಿನ ನೂರಾರು ಮಂದಿಗೆ ತುರ್ತು ಆರೋಗ್ಯ ಸೇವೆ ಒದಗಿಸುತ್ತಿವೆ ಎಂದು ತಿಳಿಸಿದರು.

ಶಾಸಕ ರಿಜ್ವಾನ್ ಅರ್ಷದ್ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!