ಹೊಸದಿಗಂತ , ವಿಜಯನಗರ:
ಹೊಸಪೇಟೆ ತಾಲ್ಲೂಕಿನ ಕಮಲಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಾಜ್ಯ ಮಟ್ಟದ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಚಾಲನೆ ನೀಡಿದರು.
ಪಲ್ಸ್ ಪೋಲಿಯೋಗಾಗಿ ಆಗಮಿಸಿದ್ದ ಸಿಎಂ, ಶಾಸಕ ಎಚ್.ಆರ್.ಗವಿಯಪ್ಪ ಅವರ ಮೊಮ್ಮಗಳಿಗೆ ಮೊದಲು ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು. ಬಳಿಕ ಏಳೆಂಟು ಮಕ್ಕಳಿಗೆ ಲಸಿಕೆ ಹಾಕಿ, ತಲೆ ಸವರಿ ಶುಭ ಕೋರಿದರು.
ಈ ಸಂಧರ್ಭದಲ್ಲಿ ಕ್ರೀಡಾ ಸಚಿವ ಬಿ.ನಾಗೇಂದ್ರ, ಶಾಸಕ ಎಚ್.ಆರ್.ಗವಿಯಪ್ಪ, ಕೆಎಂಎಫ್ ಅಧ್ಯಕ್ಷ ಭಿಮಾನಾಯ್ಕ, ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ, ಜಿ.ಪಂ. ಸಿಇಒ ಬಿ.ಸದಾಶಿವ ಪ್ರಭು, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶಂಕರ್ ನಾಯ್ಕ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಶ್ವೇತಾ ಮತ್ತಿತರರು ಇದ್ದರು.