ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕರ್ನಾಟಕ ಹಾಲು ಒಕ್ಕೂಟದ (KMF) ನಂದಿನಿ ಬ್ರ್ಯಾಂಡ್ ಉತ್ಪನ್ನಗಳ ಅಧಿಕೃತ ಮಾರಾಟಕ್ಕೆ ಸಿಎಂ ಸಿದ್ದರಾಮಯ್ಯ ಗುರುವಾರ ಚಾಲನೆ ನೀಡಿದರು. ಇದರೊಂದಿಗೆ, ದೇಶದ ರಾಜಧಾನಿಯಲ್ಲೂ ನಂದಿನಿ ಉತ್ಪನ್ನಗಳ ಹವಾ ಆರಂಭವಾಗಲಿದೆ. ಈ ಮೂಲಕ ಅಮುಲ್ ಮತ್ತು ಮದರ್ ಡೇರಿಯಂತಹ ಪ್ರಮುಖ ಬ್ರ್ಯಾಂಡ್ಗಳ ಜತೆ ಕರ್ನಾಟಕದ ನಂದಿನಿ ಕೂಡ ಪೈಪೋಟಿ ಒಡ್ಡಲಿದೆ.
ದೆಹಲಿಯ ಅಶೋಕ ಹೊಟೇಲ್ನಲ್ಲಿ ನಂದಿನಿ ಬ್ರ್ಯಾಂಡ್ ಉತ್ಪನ್ನಗಳ ಬಿಡುಗಡೆ ಮಾಡುವ ಮೂಲಕ ಅಧಿಕೃತ ಮಾರಾಟಕ್ಕೆ ಚಾಲನೆ ನೀಡಲಾಯಿತು. ಇದಕ್ಕೂ ಮುನ್ನ ದೆಹಲಿಯ ಅಶೋಕ್ ಹೊಟೇಲ್ಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯಗೆ ಕನ್ನಡಿಗರಿಂದ ಪೂರ್ಣಕುಂಭ ಸ್ವಾಗತ ದೊರೆಯಿತು.
ದೆಹಲಿಯಲ್ಲಿ 3 ರಿಂದ 4 ಲಕ್ಷ ಲೀಟರ್ ಹಾಲನ್ನು ಮಾರಾಟ ಮಾಡಬೇಕು ಎಂಬ ಗುರಿ ಹಾಕಿಕೊಂಡಿದ್ದೇವೆ. ಇನ್ನು ಮುಂದೆ ದೆಹಲಿಯಲ್ಲಿ ಶೇ 100 ರಷ್ಟು ಪರಿಶುದ್ಧ ಹಾಲು ಸಿಗಲಿದೆ. ಶುದ್ಧ ಹಸುವಿನ ಹಾಲನ್ನು ದೆಹಲಿ ಜನರಿಗೆ ನೀಡುತ್ತೇವೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯಕ್ ಹೇಳಿದರು.