Monday, August 15, 2022

Latest Posts

ಸಿಎಂ ಮಮತಾ ಬ್ಯಾನರ್ಜಿ ಮೇಲೆ ದಾಳಿ: ಕಾಲಿಗೆ ಗಾಯ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇಂದು ನಂದಿಗ್ರಾಮದಿಂದ ನಾಮಪತ್ರ ಸಲ್ಲಿಸಿದ್ದು, ಈ ವೇಳೆ ಅವರ ಮೇಲೆ ಹಲ್ಲೆ ನಡೆದಿರುವ ಆರೋಪ ಕೇಳಿ ಬಂದಿದೆ.
ನಂದಿಗ್ರಾಮ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದ ವೇಳೆ ನನ್ನ ಮೇಲೆ ಹಲ್ಲೆ ನಡೆದಿದೆ ಅಂತಾ ಮಮತಾ ಬ್ಯಾನರ್ಜಿ ಆರೋಪ ಮಾಡಿದ್ದು, ಖಾಸಗಿ ಮಾಧ್ಯಮಗಳಿಗೆ ಮಮತಾ ಬ್ಯಾನರ್ಜಿ ನೀಡಿರುವ ಹೇಳಿಕೆ ಪ್ರಕಾರ, ನಾಲ್ವರು ಬಂದು ನನ್ನ ಮೇಲೆ ಹಲ್ಲೆಗೆ ಯತ್ನಿಸಿದರು. ಕಾರಿನ ಡೋರ್​​ ಏಕಾಏಕಿ ಮುಚ್ಚಿ ಬಲವಂತ ಮಾಡಲು ಮುಂದಾಗಿದ್ದಾರೆ. ಇದರಿಂದ ನನ್ನ ಕಾಲಿಗೆ ಏಟಾಗಿದೆ ಅಂತಾ ಆರೋಪಿಸಿದ್ದಾರೆ.
ಈ ಸಂಬಂಧ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇನೆ. ಚುನಾವಣಾ ಆಯೋಗ ಪಾರದರ್ಶಕತೆಯಿಂದ ತನಿಖೆ ನಡೆಸಬೇಕು. ಘಟನಾ ಸ್ಥಳದಲ್ಲಿ ಯಾವುದೇ ಭದ್ರತಾ ಸಿಬ್ಬಂದಿ ಇರಲಿಲ್ಲ ಎಂದು ಕಿಡಿಕಾರಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss