ಪಾನಿಪೂರಿ ಮಾರಾಟ ಮಾಡಿದ ದೀದಿ: ಕ್ಯೂ ಕಟ್ಟಿದ ಜನ.!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಏನೇ ಮಾಡಿದರೂ ಅದು ಬಹಲ ದೊಡ್ಡ ಸುದ್ದಿಯಾಗುತ್ತದೆ. ಆಡಳಿತ ವ್ಯವಹಾರಗಳಲ್ಲಿ ಸದಾ ಬ್ಯುಸಿಯಾಗಿರುವ ಮಮತಾ ಬ್ಯಾನರ್ಜಿ ಇತ್ತೀಚೆಗೆ ಡಾರ್ಜಿಲಿಂಗ್‌ನಲ್ಲಿ ಪಾನಿಪೂರಿ ಮಾರಾಟ ಮಾಡುತ್ತಿರುವುದು ಕಂಡುಬಂದಿದೆ. ಗೂರ್ಖಾಲ್ಯಾಂಡ್ ಟೆರಿಟೋರಿಯಲ್ ಅಡ್ಮಿನಿಸ್ಟ್ರೇಷನ್ (ಜಿಟಿಎ) ಸದಸ್ಯರ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಲು ದೀದಿ ಗಿರಿಧಾಮಕ್ಕೆ ಆಗಮಿಸಿದ್ದರು. ಮಮತಾ ಬ್ಯಾನರ್ಜಿ ಅವರ ಡಾರ್ಜಿಲಿಂಗ್ ಭೇಟಿ ಮೂರು ದಿನಗಳ ಕಾಲ ಮುಂದುವರಿಯಲಿದೆ.

ಈ ಸಂದರ್ಭದಲ್ಲಿ, ದೀದಿ ಡಾರ್ಜಿಲಿಂಗ್‌ನ ಮಾಲ್ ರಸ್ತೆಯಲ್ಲಿರುವ ಪಾನಿಪೂರಿ ಅಂಗಡಿಗೆ ಭೇಟಿ ನೀಡಿ, ಅವರೇ ಗ್ರಾಹಕರಿಗೆ ಪಾನಿ ಪೂರಿ ಮಾರಾಟ ಮಾಡಿದರು. ಮುಖ್ಯಮಂತ್ರಿಗಳ ಕೈಯಿಂದ ನೀಡುವ ಸ್ಪೆಷಲ್‌ ಪಾನಿಪೂರಿಗಾಗಿ ಮಕ್ಕಳು, ದೊಡ್ಡವರು ಮುಗಿಬಿದ್ದರು. ಜೊತೆಗೆ ಮಮತಾ ಬ್ಯಾನರ್ಜಿ ಪಾನಿಪೂರಿ ಮಾರುವ ವಿಡಿಯೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!