ಬಿರುಸಿನ ಪ್ರಚಾರದ ಜೊತೆ ಭರ್ಜರಿ ಡ್ಯಾನ್ಸ್‌ ಮಾಡಿದ ಸಿಎಂ ಮಮತಾ!

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಲೋಕಸಭೆ ಚುನಾವಣೆಯ ಕೊನೆಯ ಹಂತದಲ್ಲಿ ರಾಜಕೀಯ ಮುಖಂಡರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ. ಈ ನಡುವೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇಂದು ರಾಜ್ಯದ ದಕ್ಷಿಣ 24 ಪರಗಣದಲ್ಲಿ ತಮ್ಮ ಸಾರ್ವಜನಿಕ ರ‍್ಯಾಲಿಯಲ್ಲಿ ವೇದಿಕೆಯ ಮೇಲೆ ಹಲವು ಮಹಿಳೆಯರೊಂದಿಗೆ ನೃತ್ಯ ಮಾಡಿದ್ದಾರೆ.

ಇದೀಗ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ಭಾರೀ ವೈರಲ್ ಆಗಿದೆ. ಸಿಎಂ ಮಮತಾ ಬ್ಯಾನರ್ಜಿ ರ‍್ಯಾಲಿ ಮುಕ್ತಾಯವಾಗುತ್ತಿದ್ದಂತೆ ವೇದಿಕೆಯಲ್ಲಿ ತೃಣಮೂಲ ಕಾಂಗ್ರೆಸ್‌ನ ಮಹಿಳಾ ಕಾರ್ಯಕರ್ತರೊಂದಿಗೆ ಸೇರಿಕೊಂಡು ಸಾಂಪ್ರದಾಯಿಕ ಗೀತೆಗೆ ನೃತ್ಯ ಮಾಡಿದ್ದಾರೆ.

https://x.com/ANI/status/1795747715332313283?ref_src=twsrc%5Etfw%7Ctwcamp%5Etweetembed%7Ctwterm%5E1795747715332313283%7Ctwgr%5Ed5cc44c38c1275fbd9f11250883f8d77bf43fba8%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fkannada%2Fkannadanewsnow-epaper-dh71ad7b0a01d347d2a0a68e5f262fdb7d%2F2026ravelegedeshadhamodalabuletrailusanchaaraaarambhakendrasachivaashvinivaishnavindiasfirstbullettrain-newsid-n585753944

ಮಮತಾ ಬ್ಯಾನರ್ಜಿ ಮಹಿಳೆಯರೊಂದಿಗೆ ನಿಂತು ಕಾಲು ಕುಣಿಸುತ್ತಾ, ಅವರ ಕೈ ಹಿಡಿದು ಹೆಜ್ಜೆ ಹಾಕುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!