ರಾಜ್ಯದಲ್ಲಿ ಕೋವಿಡ್ -19 ನಾಲ್ಕನೇ ಅಲೆ ಸಂಬಂಧಿಸಿ ಸಿಎಂ ಸಭೆ

ಹೊಸದಿಗಂತ ಡಿಜಿಟಲ್ ಡೆಸ್ಕ್
ಬೆಂಗಳೂರು:
ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಕೋವಿಡ್ ಸಾಂಕ್ರಾಮಿಕಕ್ಕೆ ಸಂಬಂಧಿಸಿದಂತೆ ಪರಿಶೀಲನಾ ಸಭೆ ಜರಗಿತು.
ಗೃಹ ಕಚೇರಿ ಕೃಷ್ಣದಲ್ಲಿ ನಡೆದ ಸಭೆಯಲ್ಲಿ ಆರೋಗ್ಯ ಸಚಿವ ಡಾ. ಕೆ.ಸುಧಾಕರ್, ಕಂದಾಯ ಸಚಿವ ಆರ್.ಅಶೋಕ್, ಸರಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್, ಅಭಿವೃದ್ಧಿ ಆಯುಕ್ತೆ ಹಾಗೂ ಅಪರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಕೋವಿಡ್ ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷ ಡಾ. ಎಂ.ಕೆ.ಸುದರ್ಶನ್, ರಾಷ್ಟ್ರೀಯ ಆರೋಗ್ಯ ಮಿಷನ್ ನಿರ್ದೇಶಕಿ ಡಾ. ಅರುಂಧತಿ ಚಂದ್ರಶೇಖರ್, ಆರೋಗ್ಯ ಇಲಾಖೆ ಆಯುಕ್ತ ಡಿ. ರಂದೀಪ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಆಡಳಿತಾಧಿಕಾರಿ ರಾಕೇಶ್ ಸಿಂಗ್, ವಿಶೇಷ ಆಯುಕ್ತ (ಆರೋಗ್ಯ) ತ್ರಿಲೋಕಚಂದ್ರ ಮೊದಲಾದವರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!