ಹೊಸದಿಗಂತ ವರದಿ, ಕಾರವಾರ:
ಉತ್ತರ ಕನ್ನಡ ಜಿಲ್ಲೆಯ ನೂತನ ವಿಧಾನ ಪರಿಷತ್ ಶಾಸಕರಾದ ಗಣಪತಿ ಉಳ್ವೇಕರ್ ಅವರು ಗುರುವಾರ ಬೆಳಗಾವಿಯ ಸುವರ್ಣಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಹಾಗೂ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿಯಾಗಿ ಉತ್ತರಕನ್ನಡದ ಗ್ರಾಮೀಣ ಪ್ರದೇಶದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರದ ಸಹಕಾರ ಕೋರಿದರು.
ಈ ವೇಳೆ ಗೃಹ ಸಚಿವ ಆರಗ ಜ್ಞಾನೇಂದ್ರ, ಸಚಿವರಾದ ಶ್ರೀರಾಮುಲು, ಆನಂದ್ ಸಿಂಗ್, ಸುನಿಲ್ ಕುಮಾರ್ ಅವರು ಹಾಜರಿದ್ದರು. ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಕ್ಕಾಗಿ ಸಭಾಪತಿಗಳು, ಮುಖ್ಯಮಂತ್ರಿಗಳು ಹಾಗೂ ಸಚಿವರು ಗಣಪತಿ ಉಳ್ವೇಕರ್ ಅವರನ್ನು ಅಭಿನಂದಿಸಿದರು.