ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಗಾಯಾಳುಗಳನ್ನು ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ್ದು, ಆರೋಗ್ಯ ವಿಚಾರಿಸಿದ್ದಾರೆ.
ಬ್ರೂಕ್ ಫೀಲ್ಡ್ ಹಾಗೂ ವೈದೇಹಿ ಆಸ್ಪತ್ರೆಯಲ್ಲಿರುವ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುತ್ತದೆ ಎಂದು ಸಿಎಂ ಹೇಳಿದ್ದಾರೆ.
ಇನ್ನೆರಡು ದಿನದಲ್ಲಿ ಆರೋಪಿಗಳನ್ನು ಬಂಧಿಸುತ್ತೇವೆ, ಇದರ ಆಳಕ್ಕಿಳಿದು ಯಾವ ಕೇಸ್‌ಗಾದರೂ ಸಂಬಂಧ ಇದೆಯಾ ನೋಡುತ್ತೇವೆ ಎಂದು ಹೇಳಿದ್ದಾರೆ.