ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರು ಸಿದ್ದರಾಮಯ್ಯ ಅವರ ಜೊತೆ ಮಾತನಾಡಿದ್ದಾರೆ ಎನ್ನಲಾಗಿರುವ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ವಿಪಕ್ಷಗಳು ಈ ಬಗ್ಗೆ ತನಿಖೆಯಾಗಲೇಬೇಕು ಎಂದು ಪಟ್ಟು ಹಿಡಿದಿವೆ.
ಇದೀಗ ಸಿದ್ದರಾಮಯ್ಯ ಅವರು ಎರಡು ದಿನಗಳ ಮೈಸೂರು ಪ್ರವಾಸ ಹಮ್ಮಿಕೊಂಡಿದ್ದು, ಪ್ರತಿಯೊಂದು ಹೆಜ್ಜೆಯಲ್ಲಿಯೂ ಇದರ ಕುರಿತಾದ ಪ್ರಶ್ನೆಗಳು ಎದುರಾಗುವ ಸಾಧ್ಯತೆ ಇದೆ. ಇಂದು ಕನಕ ವಿದ್ಯಾರ್ಥಿ ನಿಲಯ, ಕಡಲೆ ಮಾರಮ್ಮ ದೇಗುಲ ಉದ್ಘಾಟನೆ ಸೇರಿದಂತೆ ಹಲವು ಕಾರ್ಯಕ್ರಮದಲ್ಲಿ ಸಿಎಂ ಭಾಗಿಯಾಗಲಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ ತಿಂಗಳ ಹಣ ಚಾಮುಂಡಿ ತಾಯಿಗೆ:
ಕಾಂಗ್ರೆಸ್ ಸರ್ಕಾರದ ಬಹುಮುಖ್ಯ ಯೋಜನೆ ಗೃಹಲಕ್ಷ್ಮಿ, ಪ್ರತಿ ಮನೆಯ ಯಜಮಾನಿಗೆ ತಿಂಗಳಿಗೆ ಎರಡು ಸಾವಿರ ರೂಪಾಯಿ ನೀಡಲಾಗುತ್ತದೆ. ಈ ಯೋಜನೆಗೆ ಚಾಲನೆ ಸಿಕ್ಕಿದ್ದು ಮೈಸೂರಿನಲ್ಲಿ, ಚಾಲನೆ ವೇಳೆ ಮೊದಲ ತಿಂಗಳ ಹಣವನ್ನು ಚಾಮುಂಡಿ ತಾಯಿಗೆ ಅರ್ಪಿಸಲಾಗಿತ್ತು.
ಇದೀಗ ಎಂಎಲ್‌ಸಿ ದಿನೇಶ್ ಗೂಳಿಗೌಡ ಸಿಎಂ ಹಾಗೂ ಡಿಸಿಎಂಗೆ ಪತ್ರ ಬರೆದಿದ್ದು, ಪ್ರತಿ ತಿಂಗಳು ದೇವಸ್ಥಾನಕ್ಕೆ ಯೋಜನೆಯ ಹಣ ನೀಡುವಂತೆ ಮನವಿ ಮಾಡಿದ್ದಾರೆ. ಸರ್ಕಾರ ಇದಕ್ಕೆ ಅಸ್ತು ಎಂದಿದೆ.