ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣ ಅಖಾಡ ರಂಗೇರಿದ್ದು, ಇಂದಿನಿಂದ ಮೂರು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಪ್ರವಾಸ ಮಾಡಲಿದ್ದಾರೆ.
ಮೂಸೂರು ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರದ ಮೇಲೆ ಕಾಂಗ್ರೆಸ್ ಕಣ್ಣಿಟ್ಟಿದ್ದು, ಇಂದು ವರುಣ ಕ್ಷೇತ್ರದಿಂದ ಪ್ರಚಾರ ಆರಂಭವಾಗಲಿದೆ. ಬಳಿಕ ಮಧ್ಯಾಹ್ನ 3 ಗಂಟೆಗೆ ಟಿ.ನರಸೀಪುರ, ಏ.2ರ ಬೆಳಗ್ಗೆ 10ಕ್ಕೆ ಶಂಕರಮಠಕ್ಕೆ ಸಿಎಂ ಭೇಟಿ ನೀಡಲಿದ್ದು, 11 ಗಂಟೆಗೆ ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಮಾಡಲಿದ್ದಾರೆ. ಸಂಜೆ 4ಕ್ಕೆ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಸಿಎಂ ಸಭೆ ಹಾಗೂ ಚುನಾವಣಾ ಪ್ರಚಾರ ನಡೆಸಲಿದ್ದಾರೆ.
ಇನ್ನು ಏ.3ಕ್ಕೆ ಬೆಳಗ್ಗೆ 9:30ಕ್ಕೆ ಸುತ್ತೂರು ಮಠಕ್ಕೆ ಸಿದ್ದರಾಮಯ್ಯ ಭೇಟಿ ನೀಡಿ ಸುತ್ತೂರು ಶ್ರೀಗಳ ಆಶೀರ್ವಾದ ಪಡೆಯಲಿದ್ದಾರೆ. ಬೆಳಗ್ಗೆ 10:35ಕ್ಕೆ ಚಾಮರಾಜನಗರ ಜಿಲ್ಲೆಗೆ ಸಿಎಂ ಭೇಟಿ ನೀಡಲಿದ್ದು, ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ನಾಮಪತ್ರ ಸಲ್ಲಿಕೆಯಲ್ಲಿ ಭಾಗಿಯಾಗಲಿದ್ದಾರೆ.