March 3, 2026
Tuesday, March 3, 2026
spot_img

ಬಿಹಾರ ರಾಜಕೀಯಕ್ಕೆ ಸಿಎಂ ನಿತೀಶ್ ಪುತ್ರ ನಿಶಾಂತ್ ಕುಮಾರ್ ಎಂಟ್ರಿ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬಿಹಾರ ರಾಜಕೀಯದಲ್ಲಿ ಹೊಸ ಯುಗ ಶುರುವಾಗಲಿದ್ದು, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್ ರಾಜಕೀಯಕ್ಕೆ ಎಂಟ್ರಿ ಆಗಲು ವೇದಿಕೆ ಸಜ್ಜಾಗಿದೆ.

ಈ ಕುರಿತು ಸಚಿವ ಶ್ರವಣ್ ಕುಮಾರ್ ಮಾಹಿತಿ ನೀಡಿದ್ದು, ಅಧಿಕೃತ ಘೋಷಣೆಯಾಗಲಿದ್ದು, ಪಕ್ಷದಲ್ಲಿ ಅವರು ನಿಭಾಯಿಸುವ ಜವಾಬ್ದಾರಿಯ ಕುರಿತೂ ಮಾಹಿತಿ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಪಕ್ಷವು ಒಂದು ಅಥವಾ ಎರಡು ದಿನಗಳಲ್ಲಿ ಈ ಕುರಿತು ಅಧಿಕೃತ ಘೋಷಣೆ ಮಾಡಲಿದೆ. ನಿಶಾಂತ್ ಅವರು ರಾಜಕೀಯಕ್ಕೆ ಬರಬೇಕೆಂದು ಪಕ್ಷದ ಕಾರ್ಯಕರ್ತರು ಕಳೆದ ಹಲವು ವರ್ಷಗಳಿಂದ ಒತ್ತಾಯಿಸುತ್ತಿದ್ದರು. ಹೋಳಿ ಹಬ್ಬದ ಮುನ್ನವೇ ಈ ನಿರ್ಧಾರ ಹೊರಬಂದಿರುವುದು ಕಾರ್ಯಕರ್ತರು ಮತ್ತು ಬೆಂಬಲಿಗರಲ್ಲಿ ಸಂಭ್ರಮ ಮೂಡಿಸಿದೆ ಎಂದು ಅವರು ಹೇಳಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !