ನಾಳೆ ಸಿಎಂ ಪದಗ್ರಹಣ ಕಾರ್ಯಕ್ರಮ: ವಿವಿಐಪಿಗಳಿಗೆ ಝಡ್‌ ಪ್ಲಸ್‌ ಭದ್ರತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನಿರೀಕ್ಷೆಯಂತೆಯೇ ನಾಳೆ ಸಿದ್ದರಾಮಯ್ಯ, ಡಿಕೆಶಿ ಸಿಎಂ, ಡಿಸಿಎಂ ಆಗಿ ಪದಗ್ರಹಣ ಮಾಡಲಿದ್ದಾರೆ. ಇದಕ್ಕಾಗಿ ಕಂಠೀರವ ಕ್ರೀಡಾಂಗಣದಲ್ಲಿ ಸಕಲ ಸಿದ್ದತೆ ನಡೆಯುತ್ತಿದ್ದು, ಪ್ರಮಾಣ ವಚನ ಕಾರ್ಯಕ್ರಮಕ್ಕೆ ಕಾಂಗ್ರೆಸ್‌ ಆಡಳಿತವಿರುವ ಮುಖ್ಯಮಂತ್ರಿಗಳು ಬರಲಿದ್ದಾರೆ. ಬರುವ ಎಲ್ಲಾ ವಿವಿಐಪಿಗಳಿಗೂ ಝಡ್‌ ಪ್ಲಸ್‌ ಭದ್ರತೆ ಸಿಗಲಿದೆ. ಸಮಾರಂಭಕ್ಕೆ ಘಟಾನುಘಟಿ ನಾಯಕರು ಹಾಗೂ ಬರುವ ವಿವಿಐಪಿಗಳಿಗೆ Z+, CRPF ASL ಪ್ರೊಟೆಕ್ಟ್​ರಿಂದ ಭದ್ರತೆ ನೀಡಲಾಗಿದೆ.

ಸ್ಟೇಡಿಯಂ ಸುತ್ತ ಬಿಗಿ ಪೊಲೀಸ್‌ ಭದ್ರತೆ

ಹೆಚ್ಚಿನ ಸಂಖ್ಯೆಯಲ್ಲಿ ಜನ ಬರುವುದರಿಂದ ಕ್ರೀಡಾಂಗಣದ ಸುತ್ತ ಹೆಚ್ಚುವರಿ ಭದ್ರತೆ ನಿಯೋಜಿಸಲಾಗಿದೆ. ಅದಕ್ಕಾಗಿ ಇಬ್ಬರು ಜಂಟಿ ಪೊಲೀಸ್ ಆಯುಕ್ತರು ಸೇರಿದಂತೆ ಹೆಚ್ಚುವರಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಎಂಟು ಮಂದಿ ಡಿಸಿಪಿ, 10 ಮಂದಿ ಎಸಿಪಿ, 28 ಇನ್ಸ್​​ಪೆಕ್ಟರ್​ಗಳು, 1,500ಕ್ಕೂ ಪೊಲೀಸ್‌ ಪೇದೆಗಳು ಹಾಗೂ ಟ್ರಾಫಿಕ್ ನಿರ್ವಹಣೆಗಾಗಿ 500 ಸಂಚಾರಿ ಪೊಲೀಸರ ನಿಯೋಜನೆ ಮಾಡಲಾಗಿದೆ.

2 ಗೇಟ್​​​ಗಳಲ್ಲಿ ವಿವಿಐಪಿ ವಾಹನಗಳ ಪ್ರವೇಶಕ್ಕೆ ಅವಕಾಶವಿದ್ದು, 2 ಲಕ್ಷಕ್ಕೂ ಅಧಿಕ ಜನ ಸೇರುವ ನಿರೀಕ್ಷೆ ಇದೆ. ಹಾಗಾಗಿ ಒಂದು ಲಕ್ಷಕ್ಕೂ ಹೆಚ್ಚು ಆಸನದ ವ್ಯವಸ್ಥೆ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!