ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್‌ಗಳ ಪರಿಷ್ಕರಣೆ ಮಾಡುತ್ತಿರುವ ಸುದ್ದಿಯ ನಡುವೆ ಸಿಎಂ ಸಿದ್ದರಾಮಯ್ಯ ಮತ್ತೊಂದು ಖಡಕ್ ಸೂಚನೆ ರವಾನಿಸಿದ್ದಾರೆ. ರಾಜ್ಯದಲ್ಲಿ ಐದು ಸಾವಿರಕ್ಕೂ ಹೆಚ್ಚು ಸರ್ಕಾರಿ ನೌಕರರು ಬಿಪಿಎಲ್ ಕಾರ್ಡ್ ಹೊಂದಿದ್ದಾರೆ ಎಂದು ಸಿಎಂ ಹೇಳಿದ್ದರು.
ಬಿಪಿಎಲ್ ಕಾರ್ಡ್ ಹೊಂದಿರುವ ಈ ಸರ್ಕಾರಿ ನೌಕರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಿಎಂ ಸೂಚನೆ ನೀಡಿದ್ದಾರೆ ಎಂದು ಕರ್ನಾಟಕ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಷಡಕ್ಷರಿ ಹೇಳಿದ್ದಾರೆ. ಸರ್ಕಾರದ ಉಚಿತ ಯೋಜನೆಗಳು ಬಡವರಿಗೆ ತಲುಪಬೇಕು. ಸರ್ಕಾರಿ ನೌಕರರು ಬಿಪಿಎಲ್ ಕಾರ್ಡ್ ಸೌಲಭ್ಯ ವನ್ನು ಪಡೆಯುಯತ್ತಿದ್ದಾರೆ ಅನ್ನೋ ಆರೋಪ ಈ ಹಿಂದೆಯೋ ಕೇಳಿ ಬಂದಿತ್ತು.
ಕೆಲವು ನೌಕರರು ಸರ್ಕಾರಿ ಕೆಲಸ ಸಿಗುವ ಮುನ್ನ ಬಿಪಿಎಲ್ ಕಾರ್ಡ್ ಹೊಂದಿರುತ್ತಾರೆ. ಇತ್ತೀಚಿನ ದಿನಗಳಲ್ಲಿ ಸರ್ವಿಸ್ ಗೆ ಸೇರಿರುವವರು ಬಿಪಿಎಲ್ ಕಾರ್ಡ್ ಹಿಂದಿರುಗಿಸೋದನ್ನು ಮರೆತಿರುತ್ತಾರೆ. ಸಾಮಾನ್ಯವಾಗಿ ಐದಾರು ವರ್ಷಗಳಿಂದ ಸರ್ಕಾರಿ ಸೇವೆಯಲ್ಲಿ ಇರುವವರು ಕಾರ್ಡ್ ಹೊಂದಿರುವುದಿಲ್ಲ ಎಂದು ಹೇಳಿದ್ದಾರೆ.