July 16, 2026
Thursday, July 16, 2026
spot_img

ಮುಮ್ಮಡಿ ನಿರ್ವಾಣ ಮಹಾಸ್ವಾಮಿ ಲಿಂಗೈಕ್ಯ: ಭಾವುಕ ಅಂತಿಮ ನಮನ ಸಲ್ಲಿಸಿದ ಸಿಎಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕನಕಪುರದ ಐತಿಹಾಸಿಕ ದೇಗುಲ ಮಠದ ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳು ಲಿಂಗೈಕ್ಯರಾಗಿದ್ದು, ಸಿಎಂ ಡಿ.ಕೆ. ಶಿವಕುಮಾರ್‌ ಅಂತಿಮ ದರುಶನ ಪಡೆದು ಭಾವುಕರಾಗಿದ್ದಾರೆ.

ಮಠಾಧೀಶರು, ಸಾವಿರಾರು ಭಕ್ತರು ಹಾಗೂ ಸಾರ್ವಜನಿಕರು ಸ್ವಾಮೀಜಿಯ ಅಂತಿಮ ದರುಶನ ಪಡೆದಿದ್ದಾರೆ. ಸಿಎಂ ಡಿ.ಕೆ. ಶಿವಕುಮಾರ್‌ ಕೂಡ ದರುಶನ ಪಡೆದಿದ್ದು, ನಂತರ ಭಾವುಕರಾಗಿದ್ದಾರೆ.ಈ ವೇಳೆ ಸಚಿವ ಈಶ್ವರ್ ಖಂಡ್ರೆ, ಮಾಜಿ ಸಂಸದ ಡಿ.ಕೆ. ಸುರೇಶ್ ಹಾಗೂ ಎಂಎಲ್ಸಿ ಎಸ್. ರವಿ ಕುಮಾರ್ ಉಪಸ್ಥಿತರಿದ್ದರು.

ಶ್ರೀಗಳ ಪಾರ್ಥೀವ ಶರೀರದ ಮೇಲೆ ತ್ರಿವರ್ಣ ಧ್ವಜ ಹೊದಿಸಿ ಮೂರು ಸುತ್ತು ಗುಂಡು ಹಾರಿಸುವ ಮೂಲಕ ಸಕಲ ಸರ್ಕಾರಿ ಗೌರವ ಸಲ್ಲಿಸಲಾಯಿತು. ಕಿರಿಯ ಶ್ರೀಗಳಿಗೆ ತ್ರಿವರ್ಣ ಧ್ವಜವನ್ನು ಹಸ್ತಾಂತರಿಸುವ ವೇಳೆ ಸಿಎಂ ಗದ್ಗದಿತರಾದರು. ಶ್ರೀಗಳ ಸಾವಿಗೆ ಕಣ್ಣೀರಿನ ವಿದಾಯ ಹೇಳಿದ ಬಳಿಕ ಸಿಎಂ ಹಾಗೂ ಸಚಿವ ಈಶ್ವರ್ ಖಂಡ್ರೆ ಅವರು ಮಠದ ಆವರಣದಲ್ಲೇ ಕೆಲಕಾಲ ಕುಳಿತು ನುಡಿನಮನ ಸಲ್ಲಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !