Sunday, February 28, 2021

Latest Posts

ಕೇರಳ- ಕರ್ನಾಟಕ ಗಡಿಯಲ್ಲಿ ನಿರ್ಬಂಧ: ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಪಿಣರಾಯ್ ವಿಜಯನ್

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೇರಳದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳ- ಕರ್ನಾಟಕ ಗಡಿಯಲ್ಲಿ ನಿರ್ಬಂಧಗಳನ್ನು ವಿಧಿಸಿರುವ ವಿರುದ್ಧ ಕೇರಳ ಸರ್ಕಾರ ಕೇಂದ್ರಕ್ಕೆ ದೂರು ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯ ಪ್ರವೇಶಿಸಬೇಕು ಎಂದು ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅವರು ಒತ್ತಾಯಿಸಿದ್ದಾರೆ.
ಈ ಕುರಿತು ಪ್ರಧಾನಿ ಮೋದಿಗೆ ಪತ್ರ ಬರೆದಿರುವ ಕೇರಳ ಸಿಎಂ, ಅಂತಾರಾಜ್ಯ ಗಡಿ ಬಂದ್ ಮಾಡುವುದು ಮತ್ತು ನಿರ್ಬಂಧ ವಿಧಿಸುವುದು ಕೇಂದ್ರ ಸರ್ಕಾರದ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ. ಅಂತಾರಾಜ್ಯ ಪ್ರಯಾಣಕ್ಕೆ ಯಾವುದೇ ರಾಜ್ಯ ನಿರ್ಬಂಧ ಹೇರುವಂತಿಲ್ಲ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ ತುರ್ತು ಮಧ್ಯ ಪ್ರವೇಶಿಸಿ ನೆರೆಯ ರಾಜ್ಯಕ್ಕೆ ಪ್ರಯಾಣಿಸುವಾಗ ಜನರು ಎದುರಿಸುತ್ತಿರುವ ಕಷ್ಟಗಳನ್ನು ಪರಿಹರಿಸಲುಬೇಕು. ಯಾವುದೇ ರಾಜ್ಯಗಳು ಅಂತಾರಾಜ್ಯ ಪ್ರಯಾಣವನ್ನು ತಡೆಯಬಾರದು ಎಂಬ ಕೇಂದ್ರ ಸರ್ಕಾರದ ಸೂಚನೆಗೆ ವಿರುದ್ಧವಾಗಿ ಈ ನಿರ್ಬಂಧಗಳಿವೆ ಎಂದು ಪಿಣರಾಯಿ ದೂರಿದ್ದಾರೆ.
ಕರ್ನಾಟಕದ ಗಡಿ ನಿರ್ಬಂಧಗಳಿಂದಾಗಿ ಅಗತ್ಯ ಸರಕುಗಳನ್ನು ಸಾಗಿಸುವ ಟ್ರಕ್‌ಗಳು, ವಿದ್ಯಾರ್ಥಿಗಳು, ವೈದ್ಯಕೀಯ ಚಿಕಿತ್ಸೆಗಾಗಿ ಹೋಗುವ ರೋಗಿಗಳು ಸೇರಿದಂತೆ ಅನೇಕ ಜನರು ರಾಜ್ಯದ ಗಡಿಯಲ್ಲಿ ತೊಂದರೆಗಳನ್ನು ಅನುಭವಿಸುತ್ತಿದ್ದಾರೆ ಎಂದು ಪತ್ರದಲ್ಲಿ ತಿಳಿಸಿದರು.

 

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss

error: Content is protected !!