ಹೊಸದಿಗಂತ ಡಿಜಿಟಲ್ ಡೆಸ್ಕ್:
ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿನ ಪಟಾಕಿ ಗೋದಾಮಿನಲ್ಲಿ ಅಂಭವಿಸಿದ ಅಗ್ನಿ ಅನಾಹುತದ ಬಗ್ಗೆ ಸಮಗ್ರ ತನಿಖೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ʻಬೆಂಗಳೂರಿನಲ್ಲಿ ನಡೆದ ದುರಂತ ಘಟನೆಯೊಂದು 14 ಮಂದಿಯನ್ನು ಬಲಿತೆಗೆದುಕೊಂಡಿದೆ. ಸದ್ಯಕ್ಕೆ ನನ್ನ ಬಳಿ ಇದರ ಬಗ್ಗೆ ಸಂಬಂಧಿಸಿದಂತೆ ವಿವರವಾದ ಮಾಹಿತಿ ಇಲ್ಲ. ಅಂಗಡಿ ಅಗತ್ಯ ಪರವಾನಗಿ ಮತ್ತು ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಹೊಂದಿದೆಯೇ ಎಂಬುದನ್ನು ನಾವು ತನಿಖೆ ಮಾಡಬೇಕಿದೆʼ ಎಂದರು.
ಈ ಕುರಿತು ಸಮಗ್ರ ತನಿಖೆ ನಡೆಸಿ, ಅಂಗಡಿ ಮಾಲೀಕರ ವಿರುದ್ಧ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಈ ವಿಧ್ವಂಸಕ ಘಟನೆಯು ಭವಿಷ್ಯದಲ್ಲಿ ಇಂತಹ ದುರಂತಗಳನ್ನು ತಡೆಗಟ್ಟಲು ಸುರಕ್ಷತಾ ಕ್ರಮಗಳ ಪ್ರಾಮುಖ್ಯತೆಯನ್ನು ಒತ್ತಿ ಹೇಳುತ್ತದೆ ಎಂದರು.