ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆಆರ್‌ಎಸ್ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲು ಮುಂದಾಗಿದ್ದು, ಈ ವೇಳೆ ಕಪ್ಪು ಬಾವುಟ ಪ್ರದರ್ಶನಕ್ಕೆ ಕಬ್ಬು ಬೆಳೆಗಾರರು ತಯಾರಾಗಿದ್ದಾರೆ.
ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ಅಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಗುರುವಾರ ನಡೆದ ತುರ್ತು ಸಭೆಯಲ್ಲಿ ಪ್ರತಿಭಟನೆಗೆ ಸಂಬಂಧಿಸಿದಂತೆ ನಿರ್ಣಯ ಕೈಗೊಳ್ಳಲಾಯಿತು.
ಪ್ರಸಕ್ತ ಸಾಲಿಗೆ ಟನ್ ಕಬ್ಬಿಗೆ ರೂ.4 ಸಾವಿರ ಮುಂಗಡವನ್ನು ಸಕ್ಕರೆ ಕಾರ್ಖಾನೆಗಳಿಂದ ಕೊಡಿಸಬೇಕು. ಸರ್ಕಾರದ ಆದೇಶದಂತೆ ಕಳೆದ ಸಾಲಿನ ಲಾಭಾಂಶ ಟನ್‌ಗೆ ರೂ.150 ಬಾಕಿ ಕೊಡಿಸಬೇಕು. ಸಕ್ಕರೆ ಕಾರ್ಖಾನೆಗಳ ಮುಖ್ಯ ದ್ವಾರದಲ್ಲಿ ಎಪಿಎಂಸಿಯಿಂದಲೇ ತೂಕದ ಯಂತ್ರ ಅಳವಡಿಸಬೇಕು. ಅಂತರ ಜಿಲ್ಲಾ ಕಬ್ಬು ಸಾಗಣೆಗೆ ನಿರ್ಬಂಧ ಹೇರಬಾರದು ಎನ್ನುವುದು ಕಬ್ಬು ಬೆಳೆಗಾರರ ಒತ್ತಾಯವಾಗಿದೆ.