Thursday, July 7, 2022

Latest Posts

ಹಂಪಿ ಕನ್ನಡ ವಿವಿಯಲ್ಲಿ 128 ಪುಸ್ತಕಗಳ ಬಿಡುಗಡೆ, ನೂತನ ಕಟ್ಟಡಗಳಿಗೆ ಸಿಎಂ ಚಾಲನೆ

ಹೊಸದಿಗಂತ ವರದಿ ವಿಜಯನಗರ: 

ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ನಿರ್ಮಿಸಲಾಗಿರುವ ನೂತನ ಕಟ್ಟಡಗಳಿಗೆ ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ ಅವರು ಶನಿವಾರ ಚಾಲನೆ ನೀಡಿದರು. ವಿಶ್ವ ವಿದ್ಯಾಲಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಅವರು, ನೂತನವಾಗಿ ನಿರ್ಮಿಸಲಾದ ಓನಕೆ ಓಬವ್ವ ಅಧ್ಯಯನ ಕೇಂದ್ರ, ವಿದ್ಯಾರ್ಥಿಗಳ ಎರಡು ವಸತಿ ನಿಲಯಗಳು, ಪ್ರಸಾರಂಗದ ನವೀಕೃತ ಚಿತ್ತಾರ ಕಟ್ಟಡ,ಪತ್ರಿಕೋದ್ಯಮ ವಿಭಾಗದ ಕಟ್ಟಡಗಳಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ 128 ಪುಸ್ತಕಗಳನ್ನು ಬಿಡುಗಡೆಗೊಳಿಸಿದರು. ವಿವಿಯ ಸಂಚಾರ ಪುಸ್ತಕ ಮಾರಾಟ ವಾಹನವನ್ನು ಸಹ ಲೋಕಾರ್ಪಣೆಗೊಳಿಸಿದರು.
ಈ ಸಂದರ್ಭದಲ್ಲಿ ಗೃಹ ಸಚಿವರಾದ ಆರಗ ಜ್ಞಾನೇಂದ್ರ,  ಬಿ.ಶ್ರೀರಾಮುಲು,  ಡಾ.ಸಿ.ಎನ್.ಅಶ್ವಥ್ ನಾರಾಯಣ, ಶಶಿಕಲಾ ಜೊಲ್ಲೆ, ಸಂಸದ ಅಣ್ಣಾ ಸಾಹೇಬ್ ಜೊಲ್ಲೆ, ಬಳ್ಳಾರಿ ನಗರ ಶಾಸಕ ಸೋಮಶೇಖರ್ ರೆಡ್ಡಿ, ಎಂಎಲ್‌ಸಿ ವೈ.ಎಂ.ಸತೀಶ್, ಕನ್ನಡ ವಿಶ್ವವಿದ್ಯಾಲಯದ ಕುಲಪತಿ ಡಾ.ಸ.ಚಿ.ರಮೇಶ, ವಿಜಯನಗರ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್, ಎಸ್ಪಿ ಡಾ.ಅರುಣ್ ಎಸ್.ಕೆ, ಕುಲಸಚಿವ ಡಾ.ಎ.ಸುಬ್ಬಣ್ಣ ರೈ, ಸೇರಿದಂತೆ ಸಂಚಾರಿ ಪುಸ್ತಕ ಮಾರಾಟ ವಾಹನವನ್ನು ವಿವಿಗೆ ದೇಣಿಗೆಯಾಗಿ ನೀಡಿದ ಬಲ್ಡೋಟ ಗ್ರೂಪ್ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಡಾ.ನರೇಂದ್ರಕುಮಾರ್ ಬಲ್ಡೋಟ ಇತರರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss