Wednesday, June 29, 2022

Latest Posts

ಕೇಂದ್ರದ ಅನುಮತಿ ದೊರೆತ ಕೂಡಲೇ ರಾಗಿ ಖರೀದಿ ಪುನರಾರಂಭ: ಸಿಎಂ ಬೊಮ್ಮಾಯಿ ಭರವಸೆ

ಹೊಸದಿಗಂತ ವರದಿ, ಚಿತ್ರದುರ್ಗ:

ಕೇಂದ್ರ ಸರ್ಕಾರದ ಅನುಮತಿ ದೊರೆತ ತಕ್ಷಣವೇ ಬೆಂಬಲ ಬೆಲೆ ಯೋಜನೆಯಡಿ ಹೆಚ್ಚುವರಿ ರಾಗಿ ಖರೀದಿ ಪ್ರಕ್ರಿಯೆಯನ್ನು ಪುನರಾರಂಭ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಚಿತ್ರದುರ್ಗ ತಾಲ್ಲೂಕಿನ ಭೀಮಸಮುದ್ರ ಗ್ರಾಮಕ್ಕೆ ಶುಕ್ರವಾರ ಖಾಸಗಿ ಭೇಟಿ ನಿಮಿತ್ತ ಆಗಮಿಸಿದ ಮುಖ್ಯಮಂತ್ರಿಗಳು ಹೆಲಿಪ್ಯಾಡ್ ಬಳಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ರಾಜ್ಯದ ರೈತರು ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ರಾಗಿ ಬೆಳೆಯಲಾಗಿದ್ದು, ಬೆಂಬಲಬೆಲೆ ಯೋಜನೆಯಡಿ ಹೆಚ್ಚಿನ ರಾಗಿ ಖರೀದಿಸುವಂತೆ ಈಗಾಗಲೇ ಕೇಂದ್ರ ಮಂತ್ರಿಗಳೊಂದಿಗೆ ಸಮಾಲೋಚನೆ ಮಾಡಲಾಗಿದ್ದು, ತಾತ್ವಿಕ ಒಪ್ಪಿಗೆ ನೀಡಿದ್ದಾರೆ. ಮತ್ತೊಮ್ಮೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಹೆಚ್ಚಿನ ರಾಗಿ ಖರೀದಿಗೆ ಸಂಬಂಧಪಟ್ಟಂತೆ ಬಹುತೇಕವಾಗಿ ಇನ್ನೇರೆಡು ದಿನಗಳಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಪಿ.ಎಸ್.ಐ ನೇಮಕಾತಿಗೆ ಮರುಪರೀಕ್ಷೆ: ಪಿ.ಎಸ್.ಐ ನೇಮಕಾತಿ ಅಧಿಸೂಚನೆಯನ್ನು ರದ್ದು ಪಡಿಸಿಲ್ಲ. ಮರು ಪರೀಕ್ಷೆಗೆ ಆದೇಶ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂದು ಹೇಳಿದರು.
ಯಾವುದೇ ಪರೀಕ್ಷೆಗಳಲ್ಲಿ ಲೋಪದೋ? ಹಾಗೂ ಅನ್ಯಾಯವಾದರೆ ಅದರ ವ್ಯಾಪಕತೆ ಎಷ್ಠಿದೆ ಎಂಬುದು ಗೊತ್ತಾಗುವುದಿಲ್ಲ. ಈ ಹಿನ್ನಲೆಯಲ್ಲಿ ಪಿ.ಎಸ್.ಐ ನೇಮಕಾತಿಯ ಮರುಪರೀಕ್ಷೆ ಮಾಡಲಾಗುವುದು. ಈ ಹಿಂದೆ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗುವುದು. ನೇಮಕಾತಿ ವಿಭಾಗದ ಎಡಿಜಿಪಿಯನ್ನು ಆಡಳಿತ ದೃಷ್ಟಿಯಿಂದ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಿದರು.
ರಸ್ತೆ ಸುರಕ್ಷತಾ ಕಾಮಗಾರಿ ಉದ್ಘಾಟಿಸಿದ ಸಿ.ಎಂ. : ಲೋಕೋಪಯೋಗಿ ಇಲಾಖೆ ವತಿಯಿಂದ ೨೫೦ ಲಕ್ಷ ರೂ. ವೆಚ್ಚದ ಚಿತ್ರದುರ್ಗ ತಾಲ್ಲೂಕಿನ ಪಂಡ್ರಹಳ್ಳಿ-ಬೊಮ್ಮೆನಹಳ್ಳಿ-ಸಿರಿಗೆರೆ-ಹಿರೇಗುಂಟನೂರು ರಸ್ತೆ ಸುರಕ್ಷತಾ ಕಾಮಗಾರಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರಗೇಶ್ ನಿರಾಣಿ, ಕಂದಾಯ ಸಚಿವ ಆರ್.ಅಶೋಕ್, ಕೇಂದ್ರ ಮಾಜಿ ಸಚಿವ ಹಾಗೂ ಸಂಸದ ಜಿ.ಎಂ.ಸಿದ್ದೇಶ್ವರ, ರಾಜ್ಯ ರಸ್ತೆ ಸಾರಿಗೆ ನಿಮಗದ ಅಧ್ಯಕ್ಷರೂ ಹಾಗೂ ಶಾಸಕ ಎಂ.ಚಂದ್ರಪ್ಪ, ಚಿತ್ರದುರ್ಗ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ವಿಧಾನ ಪರಿ?ತ್ ಸದಸ್ಯರಾದ ಕೆ.ಎಸ್. ನವೀನ್, ವೈ.ಎ.ನಾರಾಯಣಸ್ವಾಮಿ, ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನೀಕೇರಿ, ಜಿಲ್ಲಾ ಪಂಚಾಯಿತಿ ಸಿಇಓ ಡಾ.ನಂದಿನಿದೇವಿ, ಪೊಲೀಸ್ ವರಿ?ಧಿಕಾರಿ ಕೆ. ಪರುಶುರಾಮ್, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕೃಷ್ಣಪ್ಪ ಸೇರಿದಂತೆ ಮತ್ತಿತರರು ಹಾಜರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss