ಹೊಸದಿಗಂತ ಡಿಜಿಟಲ್ ಡೆಸ್ಕ್:
ಹುಬ್ಬಳ್ಳಿಯ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ್ ಕೊಲೆಗೆ ಸಂಬಂಧಿಸಿದಂತೆ ಇಂದು ಸಿಎಂ ಸಿದ್ದರಾಮಯ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಮತ್ತು ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ್ ಜೊತೆ ಸಭೆ ನಡೆಸಿದ್ದಾರೆ.
ಸಭೆ ಬಳಿಕ ಸಿಎಂ ಮಾತನಾಡಿದ್ದು, ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಇಂಥ ಘಟನೆಗಳು ಮರುಕಳಿಸಬಾರದು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ. ಪರ್ಸನಲ್ ರೀಸನ್‌ಗೆ ಕೊಲೆ ಮಾಡಿದ್ದಾರೆ ಎಂದಿದ್ದಾರೆ.
ಈ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ ಮಾತನಾಡಿದ್ದು, ನೇಹಾ ಹಾಗೂ ಆರೋಪಿ ಫಯಾಜ್ ಪ್ರೀತಿಯಲ್ಲಿದ್ದರು. ಇದ್ದಕ್ಕಿದ್ದಂತೆಯೇ ನೇಹಾ ಫಯಾಜ್ ಜೊತೆ ಬ್ರೇಕಪ್ ಮಾಡಿಕೊಂಡಿದ್ದಾಳೆ. ಸಿಟ್ಟಿಗೆದ್ದ ಫಯಾಜ್ ಆಕೆಯನ್ನು ಕೊಲೆ ಮಾಡಿದ್ದಾನೆ. ಇದು ಲವ್ ಜಿಹಾದ್ ಅಲ್ಲ. ದುರದೃಷ್ಟಕರ ಘಟನೆಯಾಗಿದೆ. ಫಯಾಜ್ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.