ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ (Eknath Shinde) ನೇತೃತ್ವದ ಬಣವನ್ನು ‘ನಿಜವಾದ ಶಿವಸೇನಾ’ (real Shiv Sena) ಎಂದು ಗುರುತಿಸುವ ವಿಧಾನಸಭಾ ಸ್ಪೀಕರ್ ರಾಹುಲ್ ನಾರ್ವೇಕರ್ (Rahul Narwekar) ಅವರ ನಿರ್ಧಾರದ ವಿರುದ್ಧ ಉದ್ಧವ್ ಠಾಕ್ರೆ (Uddhav Thackeray) ನೇತೃತ್ವದ ಶಿವಸೇನಾ ಬಣ ಸೋಮವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಶಿಂಧೆ ಸೇರಿದಂತೆ 16 ಶಿವಸೇನೆ ಶಾಸಕರ ಅನರ್ಹತೆಯ ವಿರುದ್ಧದ ಅರ್ಜಿಗಳನ್ನು ಜನವರಿ 10 ಬುಧವಾರ ವಜಾಗೊಳಿಸಿರುವ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್, “ಪಕ್ಷದ 2018 ರ ಸಂವಿಧಾನವನ್ನು ಚುನಾವಣಾ ಆಯೋಗ ದಾಖಲೆಯಲ್ಲಿಲ್ಲದ ಕಾರಣ ಅದನ್ನು ಸ್ವೀಕರಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ. ಚುನಾವಣಾ ಆಯೋಗವು ಒದಗಿಸಿದ ಶಿವಸೇನಾ ಸಂವಿಧಾನವು ನಿಜವಾದ ಸಂವಿಧಾನವಾಗಿದೆ, ಇದನ್ನು ಎಸ್ಎಸ್ ಸಂವಿಧಾನ ಎಂದು ಕರೆಯಲಾಗುತ್ತದೆ ಎಂದು ಸ್ಪೀಕರ್ ಹೇಳಿದ್ದು ಏಕನಾಥ್ ಶಿಂಧೆ ಬಣವೇ ನಿಜವಾದ ಶಿವಸೇನಾ ಎಂದಿದ್ದಾರೆ.