ಸುಳ್ಳು ಹೇಳೋದ್ರಲ್ಲಿ ಸಿಎಂಗೆ ನೊಬೆಲ್ ಪ್ರಶಸ್ತಿ ಸಿಗಬೇಕು: ಪ್ರಹ್ಲಾದ್ ಜೋಶಿ ಲೇವಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಬಾರ್ಡ್‌ನಿಂದ ರಾಜ್ಯಕ್ಕೆ ಹಣ ಕಡಿಮೆ ಮಾಡಿಲ್ಲ, ಇಡೀ ದೇಶಕ್ಕೆ ಕಡಿಮೆಯಾಗಿದೆ. ಈ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಸುಳ್ಳು ಹೇಳಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅಸಮಾಧಾನ ವ್ಯಕ್ತಪಡಿಸಿದರು.

ನಗರವನ್ನುದ್ದೇಶಿಸಿ ಮಾತನಾಡಿದ ಅವರು, ಬ್ಯಾಂಕ್‌ಗಳು ಕೃಷಿ ಕ್ಷೇತ್ರಕ್ಕೆ ಉತ್ತಮ ಸಾಲವನ್ನು ನೀಡುತ್ತವೆ. ರಾಷ್ಟ್ರೀಯ ಬ್ಯಾಂಕುಗಳು ಮತ್ತು ಸಹಕಾರಿ ಬ್ಯಾಂಕುಗಳು 4% ಬಡ್ಡಿದರವನ್ನು ನೀಡುತ್ತವೆ. ಆದರೆ ಸಿಎಂ ಶೇ.7ಕ್ಕೆ ಸಾಲ ನೀಡುತ್ತಿದ್ದಾರೆ ಎಂದು ಸುಳ್ಳು ಹೇಳಿದ್ದಾರೆ.

ಪ್ರಶ್ನೆ ಕೇಳಿದರೆ ಪತ್ರಕರ್ತರಿಗೆ ಸಿಎಂ ಬೆದರಿಸುತ್ತಾರೆ. ಜನರನ್ನ ತಪ್ಪು ದಾರಿಗೆ ಎಳೆಯುವ ಕೆಲಸ ಮಾಡುತ್ತಿದ್ದಾರೆ. ಸುಳ್ಳು ಹೇಳುವುದರಲ್ಲಿ ಇವರಿಗೆ ನೊಬೆಲ್ ಪ್ರಶಸ್ತಿ ಸಿಗಬೇಕು ಎಂದು ಕಿಡಿಕಾರಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!