ಹೊಸದಿಗಂತ ವರದಿ ಶಿವಮೊಗ್ಗ:
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಜಾರಿ ನಿರ್ದೇಶನಾಲಯಕ್ಕೆ ಗೌರವ ಕೊಡುವುದು ಕಲಿಯಬೇಕು. ಇದು ಮುಖ್ಯಮಂತ್ರಿ ಹುದ್ದೆಯಲ್ಲಿ ಇರುವವರಿಗೆ ಶೋಭೆ ತರಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಸಮಾಧಾನ ವ್ಯಕ್ತಪಡಿಸಿದರು.
ನಗರದಲ್ಲಿ ಗುರುವಾರ ಸುದ್ದಿಗಾರರ ಜೊತೆ ಮಾತನಾಡಿ, ಇಡಿ ತನಿಖೆಯ ವಿರುದ್ಧ ಸಿಎಂ ಸಿದ್ದರಾಮಯ್ಯ ಮಾತನಾಡಿ ತನಿಖೆ ನಡೆಸಲು ಅವರಿಗೆ ಅಕಾರವೇ ಇಲ್ಲ ಎಂದಿದ್ದಾರೆ. ಇಡಿಗೆ ಮುಡಾ ಹಗರಣದ ಬಗ್ಗೆ ತನಿಖೆ ನಡೆಸಲು ಪೂರ್ತಿ ಅಧಿಕಾರ ಇದೆ. ಇಡಿ ಏನು ತೀರ್ಮಾನ ತೆಗೆದುಕೊಳ್ಳುತ್ತದೆ ಅದೇ ಅಂತಿಮ. ಸಿದ್ದರಾಮಯ್ಯ ವಿರುದ್ಧ ಇಡಿಗೆ ಸಾಕ್ಷ್ಯಾಧಾರಗಳು ಸಿಕ್ಕಿವೆ. ಅದಕ್ಕೆ ಸಿದ್ದರಾಮಯ್ಯ ಈ ರೀತಿ ಹೇಳಿಕೆ ಕೊಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯಪಾಲರ ಅಕಾರ ಮೊಟಕು ವಿಚಾರದಲ್ಲೂ ಕಾಂಗ್ರೆಸ್ ಹತಾಶೆಗೊಂಡಿದೆ. ಬಹಳ ಡಿಸ್ಪೆರೇಟ್ ಆಗಿ ತೀರ್ಮಾನ ಕೈಗೊಳ್ಳುತ್ತಿದ್ದಾರೆ. ಇದು ಒಳ್ಳೆಯದಲ್ಲ ಎಂದು ಗುಡುಗಿದರು.