ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯಲ್ಲಿ ಪ್ರಧಾನಿ ಮೋದಿ ನೇತೃತ್ವದ ನೀತಿ ಆಯೋಗದ ಸಭೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗೈರಾಗಿದ್ದು, ಮಹತ್ವದ ಸಭೆಗೆ ಬರದಿರಲು ಕಾರಣವೇನು ಎನ್ನುವ ಪ್ರಶ್ನೆ ಇದೀಗ ಮೂಡಿದೆ.
ದೆಹಲಿಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ವಿಕಸಿತ ಭಾರತಕ್ಕಾಗಿ ವಿಕಸಿತ ರಾಜ್ಯ ಹೆಸರಿನಲ್ಲಿ ಹತ್ತನೇ ಸಭೆ ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಆರ್ಥಿಕ ಬೆಳವಣಿಗೆ, ಸಾಮಾಜಿಕ ಕಲ್ಯಾಣ, ಮೂಲಸೌಕರ್ಯ ಅಭಿವೃದ್ಧಿ, ಮತ್ತು ಸುಸ್ಥಿರತೆಯಂತಹ ಕ್ಷೇತ್ರಗಳ ಬಗ್ಗೆ ಚರ್ಚೆ ನಡೆಸಲಾಗುತ್ತದೆ.
ಸಾಮಾನ್ಯವಾಗಿ ಎಲ್ಲಾ ಸಿಎಂಗಳು ರಾಜ್ಯದ ಅಭಿವೃದ್ಧಿ ವಿಚಾರಗಳಲ್ಲಿ ತಮ್ಮ ವಾದವನ್ನು ಪ್ರಧಾನಿ ಮುಂದೆ ಮಂಡಿಸುತ್ತಾರೆ. ಈ ಸಭೆಗೆ ಬಹುತೇಕ ರಾಜ್ಯಗಳ ಮುಖ್ಯಮಂತ್ರಿಗಳು ಆಗಮಿಸಿದ್ದರು. ಈ ಪೈಕಿ ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಹಿಮಾಚಲ ಪ್ರದೇಶ ಸಿಎಂ ಸುಖವಿಂದ್ರ ಸಿಂಗ್ ಸುಖು, ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್, ಜಮ್ಮು ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ ಸೇರಿ ಹಲವು ಇತರೆ ಪಕ್ಷಗಳ ಸಿಎಂಗಳು ಭಾಗಿಯಾಗಿದ್ದರು. ಆದ್ರೆ ಕರ್ನಾಟಕದ ಸಿಎಂ ಸಿದ್ದರಾಮಯ್ಯ ಗೈರಾಗಿದ್ದಾರೆ.