ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕೆ.ಎನ್ ರಾಜಣ್ಣ ಅವರ ರಾಜೀನಾಮೆಯನ್ನು ಸಿಎಂ ಸಿದ್ದರಾಮಯ್ಯನವರು ಅಂಗೀಕರಿಸಿದ್ದಾರೆ.
ಸಚಿವ ಕೆ.ಎನ್. ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆ ದೊಡ್ಡ ಚರ್ಚೆಗೆ ಕಾರಣವಾಗಿತ್ತು. ಆ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯನವರು ರಾಜೀನಾಮೆ ಅಂಗೀಕರಿಸಿದ್ದಾರೆ.
ರಾಜೀನಾಮೆ ಪತ್ರವನ್ನು ಸಿಎಂ ಸಿದ್ದರಾಮಯ್ಯನವರು ರಾಜ್ಯಪಾಲರಿಗೆ ಅಂಗೀಕಾರಕ್ಕಾಗಿ ರವಾನೆ ಮಾಡಲಿದ್ದಾರೆ. ಸಿಎಂ ಶಿಫಾರಸ್ಸಿನ ಮೇರೆಗೆ ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ನೀಡಿರುವ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಲಿದ್ದಾರೆ.
ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಕ್ಯಾಬಿನೆಟ್ ನಲ್ಲಿ 2ನೇ ವಿಕೆಟ್ ಪತನವಾದಂತೆ ಆಗಿದೆ. ಈ ಹಿಂದೆ ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.