ದಿಗಂತ ವರದಿ ವಿಜಯಪುರ:
ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಇಲ್ಲಿನ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಗರದಲ್ಲಿ ಈಚೆಗೆ ಹಮ್ಮಿಕೊಂಡ ವಕ್ಫ್ ಹಠಾವೋ, ದೇಶ ಬಚಾವೋ ಕಾರ್ಯಕ್ರಮದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ವಿರುದ್ಧ ಅವಾಚ್ಯ ಶಬ್ದ ಬಳಕೆ ಮಾಡಿದ್ದಾರೆ ಎನ್ನುವ ಆರೋಪದ ಹಿನ್ನೆಲೆ ಪ್ರಕರಣ ದಾಖಲಾಗಿದೆ.