ಬಾನು ಮುಷ್ತಾಕ್ , ದೀಪಾ ಬಾಸ್ತಿಗೆ 10 ಲಕ್ಷ ಪುರಸ್ಕಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬ್ಯಾಂಕ್ವೆಂಟ್ ಹಾಲ್ ನಲ್ಲಿ ಆಯೋಜಿಸಿದ್ದ ಬುಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರ ಸರ್ಕಾರಿ ಅಭಿನಂದನಾ ಕಾರ್ಯಕ್ರಮದಲ್ಲಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದಿಸಿದರು.

ಬಳಿಕ ಮಾತನಾಡಿದ ಸಿಎಂ, ಬಾನು ಮುಷ್ತಾಕ್ ಅವರು ನಮ್ಮ ಭಾಷೆಗೆ ಬುಕರ್ ಒದಗಿಸಿಕೊಡುವ ಮೂಲಕ ಕನ್ನಡದ ಕೀರ್ತಿ ಹೆಚ್ಚಿಸಿದ್ದಾರೆ. ಇದು ಇಡೀ ಕನ್ನಡ ಜಗತ್ತಿನ ಹೆಮ್ಮೆ‌ ಎಂದು ಮೆಚ್ಚುಗೆ ಸೂಚಿಸಿದರು.

ತಮ್ಮ ಕತೆಗಳ ಮೂಲಕ ಮತ್ತು ಅನುವಾದದ ಮೂಲಕ ಕನ್ನಡಕ್ಕೆ ಕೀರ್ತಿ ತಂದ ಬಾನು ಮುಷ್ತಾಕ್ , ದೀಪಾ ಬಾಸ್ತಿ ಅವರಿಗೆ ತಲಾ 10 ಲಕ್ಷ ಪುರಸ್ಕಾರ ನೀಡಲಾಗುವುದು ಎಂದು ಘೋಷಿಸಿದರು.

ಪತ್ರಕರ್ತೆಯಾಗಿ, ಲೇಖಕಿಯಾಗಿ, ವಕೀಲರಾಗಿ, ಹೋರಾಟಗಾರ್ತಿಯಾಗಿ ಸಮಾಜದಲ್ಲಿ ಗುರುತಿಸಿಕೊಂಡಿರುವುದೇ ಬಾನು ಮುಷ್ತಾಕ್ ಅವರ ಬರವಣಿಗೆಯ ಶಕ್ತಿ ಎಂದು ವಿಶ್ಲೇಷಿಸಿದರು.

ಕವಿರಾಜಮಾರ್ಗದಲ್ಲಿ ಪರಧರ್ಮ ಮತ್ತು ಪರ ವಿಚಾರಗಳನ್ನು ಸಹಾನುಭೂತಿಯಿಂದ ನೋಡುಬೇಕು ಎಂದು ಕರೆ ನೀಡಿದ್ದರೆ, ಆದಿಕವಿ ಪಂಪ ಅವರು ಮನುಷ್ಯ ಜಾತಿ ತಾನೊಂದೇ ವಲಂ ಎಂದಿದ್ದಾರೆ, ಬಸವಣ್ಣನವರು “ಇವ ನಮ್ಮವ” ಎಂದು ಹೇಳಿದ್ದಾರೆ. ಹೆಣ್ಣಿನ ಧ್ವನಿಯಾದ ಅಕ್ಕಮಹಾದೇವಿ ಅವರೂ ಇದನ್ನೇ ಧ್ವನಿಸಿದ್ದಾರೆ. ಇವರೆಲ್ಲರ ಆಶಯಗಳ ಮುಂದುವರಿಕೆಯಾಗಿ ಬಾನು ಮುಷ್ತಾಕ್ ಕೆಲಸ ಮಾಡಿದ್ದಾರೆ ಎಂದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!