ಅಧಿಕಾರದ ಅಹಂಕಾರದಲ್ಲಿ ಮೆರೆಯುತ್ತಿರುವ ಸಿಎಂ ಸಿದ್ದರಾಮಯ್ಯ: ಕಟೀಲ್ ವಾಗ್ದಾಳಿ

ಹೊಸದಿಗಂತ ವರದಿ,ವಿಜಯಪುರ:

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರದ ಅಹಂಕಾರ, ದರ್ಪದಲ್ಲಿ ಮೆರೆಯುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದರು.

ಭೀಕರ ಬರದ ನಡುವೆ ಹಂಪಿಯಲ್ಲಿ ಸಿಎಂ ಸಿದ್ದರಾಮಯ್ಯ ಡಾನ್ಸ್ ವಿಚಾರ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಬರದ ಸಮಯದಲ್ಲಿ ಸಿದ್ದರಾಮಯ್ಯ ಕಣ್ಣಲ್ಲಿ ನೀರು ಬರಬೇಕಿತ್ತು. ಜನರ ಸಮಸ್ಯೆ ಅರಿತುಕೊಳ್ಳೊದರಲ್ಲಿ ವಿಫಲರಾಗಿದ್ದಾರೆ ಎಂದು ದೂರಿದರು.
ಮುಖ್ಯಮಂತ್ರಿ ನೃತ್ಯ ಮಾಡಿದ್ದಾರೆಂದರೆ ಅವರಿಗೆ ರಾಜ್ಯದ ಜನರ ಸಮಸ್ಯೆಯ ಅರಿವಿಲ್ಲ. ಸಿದ್ದರಾಮಯ್ಯ ಅಧಿಕಾರ ನಡೆಸಬೇಕು ಅಂತಾ ಭಗವಂತನಿಗೆ ಇಚ್ಛೆ ಇಲ್ಲ. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗ ಬರಗಾಲ. ಭಗವಂತನ ಆಶೀರ್ವಾದದಿಂದ ಸಿಎಂ ಆಗಿಲ್ಲ. ಗ್ಯಾರಂಟಿ ಕಾರ್ಡ್ ಆಶೀರ್ವಾದದಿಂದ ಮುಖ್ಯಮಂತ್ರಿ ಆಗಿದ್ದಾರೆ ಎಂದು ಲೇವಡಿ ಮಾಡಿದರು.

ಸಿದ್ದರಾಮಯ್ಯ ಬ್ರೇಕ್ ಪಾಸ್ಟ್ ಮೀಟಿಂಗ್ ವಿಚಾರ ಬಗ್ಗೆ, ರಾಜ್ಯದಲ್ಲಿ ಭೀಕರ ಬರ ಆವರಿಸಿದೆ
ಕಳೆದ ಬಾರಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ 4 ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಬಾರಿ ಕೇವಲ 5 ತಿಂಗಳಲ್ಲೆ 250 ಅಧಿಕ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಜಯಪುರದಲ್ಲಿ 18 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ರೈತನಿಗೆ ಪರಿಹಾರ ನೀಡಿಲ್ಲ. ಆತ್ಮಹತ್ಯೆ ಸರಣಿಯಲ್ಲಿ ನಡೆಯುತ್ತಿವೆ. ಬರದಿಂದ ರೈತ ಕಂಗೆಟ್ಟಿದ್ದಾನೆ. ಮುಖ್ಯಮಂತ್ರಿಗೆ ಯೋಚನೆ ಇಲ್ಲ. ಈ ಬಗ್ಗೆ ಸಿಎಂ ತಲೆಕೆಡಿಕೊಂಡಿಲ್ಲ. ಬ್ರೇಕ್ ಫಾಸ್ಟ್, ಬೇರೆ ಫಾಸ್ಟ್, ಎಲ್ಲಾ ಮಾಡುತ್ತಿದ್ದಾರೆ. ರೈತರ ಬಗ್ಗೆ ಕಾಳಜಿ ಇಲ್ಲ ಎಂದು ದೂರಿದರು.

ರೈತರ ರಕ್ಷಣೆ ಮಾಡಿದ್ದರೆ ಮಾತ್ರ ಮುಖ್ಯಮಂತ್ರಿ ಸ್ಥಾನ ಉಳಿಯುತ್ತೆ. ರೈತರ ಕಡೆಗಣಿಸಿದರೆ ಇವರ ಸ್ಥಾನ ಉಳಿಯೋದಿಲ್ಲ ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!