ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಸಿದ್ದರಾಮಯ್ಯ ಆ.22 ರಂದು ಕಾಂಗ್ರೆಸ್ ಶಾಸಕಾಂಗದ ಪಕ್ಷದ ಸಭೆ ಕರೆದಿದ್ದಾರೆ.
ಆ.22 ರಂದು ಸಂಜೆ ಗಂಟೆಗೆ ವಿಧಾನಸೌಧದ 3 ನೇ ಮಹಡಿಯಲ್ಲಿ ಸಭೆ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ.
ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ , ಸಚಿವರು, ಶಾಸಕರು ಹಾಜರಿರಲಿದ್ದಾರೆ.
ಮುಡಾ ಪ್ರಕರಣದಲ್ಲಿ ನನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದ್ದು, ನ್ಯಾಯಾಲಯದಲ್ಲಿ ಪರಿಹಾರ ಸಿಗುವ ಸಂಪೂರ್ಣ ವಿಶ್ವಾಸವಿದೆ. ಸಿದ್ದರಾಮಯ್ಯನನ್ನು ರಾಜಕೀಯವಾಗಿ ಮುಗಿಸಿದರೆ, ಕಾಂಗ್ರೆಸ್ ಪಕ್ಷವನ್ನು ಮುಗಿಸಬಹುದು ಎಂಬ ಭ್ರಮೆಯಲ್ಲಿ ಪ್ರತಿಪಕ್ಷಗಳಿವೆ.ಈ ಪಿತೂರಿಯ ವಿರುದ್ಧ ಕಾನೂನು ಹಾಗೂ ರಾಜಕೀಯ ಹೋರಾಟವನ್ನು ಕೈಗೊಳ್ಳುತ್ತೇವೆ. ಇಂತಹ ರಾಜಕೀಯ ಹೋರಾಟಗಳನ್ನು ನಿರಂತರವಾಗಿ ಮಾಡಿಕೊಂಡು ಬಂದಿದ್ದು, ಇನ್ನೂ ಹೆಚ್ಚಿನ ಸ್ಪೂರ್ತಿಯೊಂದಿಗೆ ಹೋರಾಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.