CHANDRAYAAN 3| ಇಸ್ರೋ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO) ಚಂದ್ರಯಾನ 3 ಮಿಷನ್ ಯಶಸ್ವಿಯಾಗಿ ಇಂದು ಉಡಾವಣೆಯಾಗಿದೆ. ದೇಶದೆಲ್ಲೆಡೆ ಸಂಭ್ರಮ ಮನೆ ಮಾಡಿದ್ದು, ಇಸ್ರೋ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಅಭಿನಂದಿಸಿದ್ದಾರೆ.

ಈ ಕುರಿತು ಸಿಎಂ ಅವರ ಟ್ವಿಟರ್‌ ಖಾತೆಯಲ್ಲಿ, “ಇಂದು ಭಾರತಕ್ಕೆ ಹೆಮ್ಮೆಯ ಕ್ಷಣ ಮತ್ತು ಭಾರತದ ಬಾಹ್ಯಾಕಾಶ ಸಂಶೋಧನೆ ಮತ್ತು ನಾವೀನ್ಯತೆಯಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ್ದೇವೆ. ಈ ಸಾಧನೆಯು ಭಾರತದ ಯುವ ಮನಸ್ಸುಗಳನ್ನು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸಂಶೋಧನೆ ಮಾಡಲು ಪ್ರೇರೇಪಿಸುತ್ತದೆ” ಎಂದು ಟ್ವೀಟ್‌ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!