ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಉತ್ತರ ಕರ್ನಾಟಕದ ಜೀವನಾಡಿಯಾಗಿರುವ ಆಲಮಟ್ಟಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಈ ಹಿನ್ನೆಲೆ ಶನಿವಾರ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪೂಜೆ ನೆರವೇರಿಸಿ, ಬಾಗಿನ ಸಮರ್ಪಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಎಂ ಬಿ ಪಾಟೀಲ್, ಶಿವಾನಂದ ಪಾಟೀಲ್, ಆರ್ ಬಿ ತಿಮ್ಮಾಪುರ, ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಕಾರ್ಯದರ್ಶಿ ಕೃಷ್ಣಮೂರ್ತಿ ಕುಲಕರ್ಣಿ, ಕೆಬಿಜೆಎನ್ಎಲ್ ಎಂ.ಡಿ. ಮೋಹನ್ ರಾಜ್ ಮತ್ತಿತರರು ಉಪಸ್ಥಿತರಿದ್ದರು.