ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನಸಭಾ ಚುನಾವಣಾ ಪ್ರಚಾರದ ಅಖಾಡಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಆಗಮಿಸಿದ್ದು, ಇಂದು ತೆಲಂಗಾಣದಲ್ಲಿ ಪ್ರಚಾರ ನಡೆಸಲಿದ್ದಾರೆ.
ಇಂದು ಬೆಳಗ್ಗೆ 11:30 ಕ್ಕೆ ಬೆಂಗಳೂರಿನಿಂದ ಹೈದರಾಬಾದ್‌ಗೆ ತೆರಳಲಿದ್ದು, ಚುನಾವಣಾ ರ‍್ಯಾಲಿಯಲ್ಲಿ ಭಾಗವಹಿಸಿ ಕಾಂಗ್ರೆಸ್ ಪರ ಮತಯಾಚನೆ ಮಾಡಲಿದ್ದಾರೆ.
ಹೈದರಾಬಾದ್‌ನಿಂದ ಹೆಲಿಕಾಪ್ಟರ್ ಮೂಲಕ ಕಾಮರೆಡ್ಡಿ ಜಿಲ್ಲೆಗೆ ತೆರಳಲಿದ್ದು, ಮಧ್ಯಾಹ್ನ ಎರಡು ಗಂಟೆಗೆ ಬೃಹತ್ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಡಿಕೆಶಿ ತೆಲಂಗಾಣದ ಕೋದಡ್‌ನಲ್ಲಿ ಪ್ರಚಾರ ನಡೆಸಲಿದ್ದು, ಸಂಜೆ ಐದು ಗಂಟೆಗೆ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ನಂತರ ಎಂಟು ಗಂಟೆಗೆ ಹುಜೂರ್ ನಗರಕ್ಕೆ ತೆರಳಿ ರಾತ್ರಿ ಎಂಟು ಗಂಟೆಗೆ ರೋಡ್ ಶೋ ನಡೆಸಲಿದ್ದಾರೆ.
ಇಂದು ತೆಲಂಗಾಣ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ರಾಜ್ಯದ ೧೧೯ ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ಜರುಗಲಿದೆ.