ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಬೆಳಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಅವರನ್ನು ಭೇಟಿ ಮಾಡಿದ್ದು, ಕಾವೇರಿ ನೀರು ಹಂಚಿಕೆ ವಿಚಾರವಾಗಿ ಮಾತನಾಡಿದ್ದಾರೆ.
ದೆಹಲಿಯ ಅಕ್ಬರ್ ರಸ್ತೆಯ ಗಜೇಂದ್ರ ಶೇಖಾವತ್ ನಿವಾಸದಲ್ಲಿ ಭೇಟಿ ಮಾಡಿದ್ದು, ರಾಜ್ಯದ ಪರಿಸ್ಥಿತಿಯನ್ನು ವಿವರಿಸಿದ್ದಾರೆ.
ತಮಿಳುನಾಡಿಗೆ ನೀರು ಕೊಟ್ಟರೆ ಕಾವೇರಿ ಜಲಾನಯನ ಪ್ರದೇಶದ ಜನರಿಗೆ ಕುಡಿಯುವ ನೀರಿನ ಸಮಸ್ಯೆಯಾಗಲಿದೆ. ವಾಡಿಕೆಯಷ್ಟೂ ಮಳೆಯಾಗದ ಕಾರಣ ಡ್ಯಾಂಗಳಲ್ಲಿ ನೀರಿಲ್ಲ. ನಮ್ಮಲ್ಲಿ ಉಳಿದಿರುವುದು ಬರೀ 52 ಟಿಸಿಎಂ ನೀರು ಅಷ್ಟೇ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.