ಹೊಸದಿಗಂತ ಡಿಜಿಟಲ್ ಡೆಸ್ಕ್:
ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಶೇ.100ರಷ್ಟು ಉದ್ಯೋಗ ಮೀಸಲಿಡುವ ಮಸೂದೆಗೆ ಉದ್ಯಮಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಇದು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಟ್ವೀಟ್ ಅನ್ನು ಡಿಲೀಟ್ ಮಾಡಿದ್ದಾರೆ.
ನಿನ್ನೆ (ಜುಲೈ 16) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಟ್ವೀಟ್ ಮಾಡುವ ಮೂಲಕ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿದ್ದಾರೆ, ರಾಜ್ಯದ ಎಲ್ಲಾ ಖಾಸಗಿ ವಲಯಗಳಲ್ಲಿ ‘ಸಿ’ ಮತ್ತು ‘ಡಿ’ ವರ್ಗದ ಹುದ್ದೆಗಳಲ್ಲಿ 100% ಕನ್ನಡಿಗರ ನೇಮಕಾತಿಗೆ ಅನುಮತಿ ನೀಡುವ ಮಸೂದೆಗೆ ಸಂಪುಟ ಅನುಮೋದನೆ ನೀಡಿದೆ ಎಂದು ಹಂಚಿಕೊಂಡಿದ್ದಾರೆ.
ಆದರೆ ಇದಕ್ಕೆ ಕಿರಣ್ ಮಜುಂದಾರ್ ಶಾ, ಮೋಹನ್ ದಾಸ್ ಪೈ ಸೇರಿದಂತೆ ಕೈಗಾರಿಕೋದ್ಯಮಿಗಳ ವಿರೋಧ ವ್ಯಕ್ತಪಡಿಸಿದರು. ಪರಿಸ್ಥಿತಿ ಗಂಭೀರವಾದ ತಕ್ಷಣ ಸಿಎಂ ತಮ್ಮ ಟ್ವೀಟ್ ಅನ್ನು ಡಿಲೀಟ್ ಮಾಡಿದ್ದಾರೆ.