ಹೊಸದಿಗಂತ ಡಿಜಿಟಲ್ ಡೆಸ್ಕ್:
ಐತಿಹಾಸಿಕ ಹಂಪಿ ಉತ್ಸವಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.
ಇಂದಿನಿಂದ ಮೂರು ದಿನಗಳು ಈ ಉತ್ಸವ ನಡೆಯಲಿದ್ದು, ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಈ ಬಾರಿ ರಾಜ್ಯದ ಬರ ಪರಿಸ್ಥಿತಿಯನ್ನು ಗಮನದಲ್ಲಿ ಇಟ್ಟುಕೊಂಡು ಸರಳವಾದ ಹಂಪಿ ಉತ್ಸವ ಆಚರಣೆ ಮಾಡಲಾಗುತ್ತಿದೆ.
ರಾತ್ರಿ ಎಂಟು ಗಂಟೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಇತರ ಸಚಿವರು ಹಂಪಿ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ವಿಜಯನಗರ ಜಿಲ್ಲಾಡಳಿತ ಉತ್ಸವಕ್ಕೆ ಒಟ್ಟಾರೆ 17 ಕೋಟಿ ರೂಪಾಯಿ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ ಸರ್ಕಾರ 14 ಕೋಟಿ ರೂಪಾಯಿ ನೀಡಿದೆ. ಇನ್ನುಳಿದ ಹಣವನ್ನು ಸ್ಥಳೀಯರಿಂದ ಪಡೆಯಲಾಗಿದೆ.
ಗ್ರಾಮೀಣ ಕ್ರೀಡೆ, ರಂಗೋಲಿ ಸ್ಪರ್ಧೆ, ಸಂಗೀತ ಹಾಗೂ ನೃತ್ಯ ಸ್ಪರ್ಧೆ, ಸಾಂಸ್ಕೃತಿ ಕಾರ್ಯಕ್ರಮಗಳು ನಡೆಯಲಿದೆ. ಪ್ರಸಿದ್ಧ ಗಾಯಕರು, ಕಲಾವಿದರು ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.