‘ಯುವ ಸಮೃದ್ಧಿ ಸಮ್ಮೇಳನ’ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಯುವ ಸಮೃದ್ಧಿ ಸಮ್ಮೇಳನ ಮತ್ತು ಬೃಹತ್ ಉದ್ಯೋಗ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.

ನಿರುದ್ಯೋಗ ದೇಶದ ಪ್ರಮುಖ ಸಮಸ್ಯೆಯಾಗಿದೆ. ಕಳೆದ 10 ವರ್ಷಗಳಲ್ಲಿ ನಿರುದ್ಯೋಗ ಪ್ರಮಾಣ ಬೃಹತ್ತಾಗಿ ಬೆಳೆದಿದೆ. 2014 ರಲ್ಲಿ ಪ್ರಧಾನಿ ನರೇಂದ್ರ ಮೋದಿ, ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಈ 10 ವರ್ಷದಲ್ಲಿ 20 ಕೋಟಿ ಉದ್ಯೋಗ ಸೃಷ್ಟಿಸಬೇಕಿದ್ದ ಮೋದಿಯವರು, ಇರುವ ಉದ್ಯೋಗಗಳನ್ನೂ ಕಸಿದುಕೊಂಡಿದ್ದಾರೆ. ಹೀಗಾಗಿ ಪ್ರತೀ ವರ್ಷ ನಿರುದ್ಯೋಗ ಪ್ರಮಾಣ ಬೃಹತ್ತಾಗಿ ಬೆಳೆಯುತ್ತಾ ಶೇ.8.40ಕ್ಕೆ ಏರಿಕೆಯಾಗಿದೆ ಎಂದು ಆರೋಪಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!