ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಡಿನ ಸಮಸ್ತ ಮಹಿಳೆಯರಿಗೆ ಸಿಎಂ ಸಿದ್ದರಾಮಯ್ಯ ಮಹಿಳಾ ದಿನದ ಶುಭಾಶಯ ಕೋರಿದ್ದಾರೆ.
“ಹೆಣ್ಣೆಂದರೆ ಸಹನೆ, ಸಹಿಷ್ಣುತೆ, ಪ್ರೀತಿ, ತ್ಯಾಗ, ಮಮತೆಯ ಸಾಕಾರ ಮೂರ್ತಿ, ತಾಯಾಗಿ ಜನ್ಮ ಕೊಟ್ಟು, ಸಹೋದರಿಯಾಗಿ ಸಲಹಿ, ಹೆಂಡತಿಯಾಗಿ ಜೊತೆನಿಂತು, ಮಗಳಾಗಿ ಪೊರೆಯುವವಳು ಹೆಣ್ಣು. ಅವಕಾಶ ದೊರೆತರೆ ಹೆಣ್ಣು ಏನೆಲ್ಲಾ ಸಾಧಿಸಬಲ್ಲಳು ಎಂಬುದು ಇಂದು ನಮ್ಮ ಕಣ್ಣ ಮುಂದಿದೆ. ದೌರ್ಜನ್ಯ, ಅಸಮಾನತೆಗಳ ವಿರುದ್ಧದ ಮಹಿಳೆಯರ ದನಿಗೆ ನಾವು – ನೀವೆಲ್ಲರೂ ದನಿಗೂಡಿಸೋಣ” ಎಂದು ಎಕ್ಸ್ ಖಾತೆಯಲ್ಲಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.