ಹೊಸದಿಂಗತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ಅಥವಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದಲ್ಲಿ ಅಧಿಕೃತವಾಗಿ ಚಾಲನೆ ನೀಡಿದ್ದಾರೆ.
ಇಂದು ವಿಧಾನಸೌಧದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಉಚಿತ ಬಸ್ ಪ್ರಯಾಣಕ್ಕೆ ಹಸಿರು ನಿಶಾನೆ ತೋರಿದರು. ಇಂದು ಮಧ್ಯಾಹ್ನ 1 ಗಂಟೆಯಿಂದ ರಾಜ್ಯಾದ್ಯಂತ ಮಹಿಳೆಯರು ಉಚಿತವಾಗಿ ಬಸ್ ಗಳಲ್ಲಿ ಪ್ರಯಾಣಿಸಬಹುದಾಗಿದೆ.
ಶಕ್ತಿ ಯೋಜನೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶಕ್ತಿ ಯೋಜನೆಯ ಲೋಗೋ ಹಾಗೂ ಶಕ್ತಿ ಯೋಜನೆಯ ಸ್ಮಾರ್ಟ್ ಕಾರ್ಡ್ ಅನ್ನು ಬಿಡುಗಡೆ ಮಾಡಿದ್ದಾರೆ. ಬಳಿಕ ಐವರು ಮಹಿಳೆಯರಿಗೆ ಸಾಂಕೇತಿಕವಾಗಿ ಶಕ್ತಿಯೋಜನೆಯ ಸ್ಮಾರ್ಟ್ ಕಾರ್ಡ್ ವಿತರಿಸಿದ್ದಾರೆ.
ಕಾರ್ಯಕ್ರಮದಲ್ಲಿ ಡಿಸಿಎಂ ಡಿ. ಕೆ. ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗರೆಡ್ಡಿ, ಸಚಿವರಾದ ಕೆ. ಜೆ. ಜಾರ್ಜ್, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಶಾಸಕರಾದ ರಿಜ್ವಾನ್ ಅರ್ಷದ್, ಗೋವಿಂದರಾಜ್, ಬಿ ಕೆ ಹರಿಪಸ್ರಾದ್, ಯು. ಬಿ. ವೆಂಕಟೇಶ್, ನಾಗರಾಜ್ ಯಾದವ್ ಹಾಗೂ ಎ. ಸಿ. ವೆಂಕಟೇಶ ಉಪಸ್ಥಿತರಿದ್ದರು.