70ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಹೊಸದಿಗಂತ ವರದಿ ವಿಜಯಪುರ:

70ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭಕ್ಕೆ ಸಿಎಂ ಸಿದ್ದರಾಮಯ್ಯ ಇಂದು ಚಾಲನೆ ನೀಡಿದರು.

ಸೊಲ್ಲಾಪುರ ರಸ್ತೆಯ ಕಿತ್ತೂರು ರಾಣಿ ಚನ್ನಮ್ಮ ನಗರದ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಆವರಣದಲ್ಲಿ 70ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಸಮಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಅದಾಗ್ಯೂ ಅವರು ವಿಜಯಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ಶತಮಾನೋತ್ಸವ ಭವನ ಉದ್ಘಾಟನೆ ಹಾಗೂ ಸಹಕಾರ ರತ್ನ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನೆರವೇರಿಸಿದರು.

ಬೆಂಗಳೂರಿನ ರಾಜ್ಯ ಸಹಕಾರ ಮಹಾಮಂಡಳ ಹಾಗೂ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನೇತೃತ್ವ ಸೇರಿದಂತೆ ವಿವಿಧ ಸಹಕಾರ ಸಂಘಗಳ ವತಿಯಿಂದ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸಹಕಾರ ಸಚಿವ ಕೆ.ರಾಜಣ್ಣ, ಸಹಕಾರಿ ಮಂಡಳಿಯ ಜಿ.ಟಿ. ದೇವೇಗೌಡ, ಜವಳಿ, ಸಕ್ಕರೆ ಹಾಗೂ ಕೃಷಿಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ, ವಿಜಯಪುರ ಸಂಸದ ರಮೇಶ ಜಿಗಜಿಣಗಿ, ಬಾಗಲಕೋಟೆ ಸಂಸದ ಪಿ.ಸಿ. ಗದ್ದಿಗೌಡರ, ಶಾಸಕರಾದ ಸಿ.ಎಸ್. ಅಪ್ಪಾಜಿ ನಾಡಗೌಡ, ಯಶವಂತರಾಯಗೌಡ ಪಾಟೀಲ, ವಿನಯ ಕುಲಕರ್ಣಿ, ರಾಘವೇಂದ್ರ ಹಿಟ್ನಾಳ, ವಿಠ್ಠಲ ಕಟಕಧೋಂಡ, ಅಶೋಕ ಮನಗೂಳಿ, ರಾಜುಗೌಡ ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ ಹುಕ್ಕೇರಿ, ಸುನೀಲಗೌಡ ಪಾಟೀಲ ಮತ್ತಿತರರು ಇದ್ದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!