ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಿಗ್ಗಾಂವಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ ಬೆನ್ನಲ್ಲೇ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಅವರಿಗೆ ಕಾಂಗ್ರೆಸ್ ಭರ್ಜರಿ ಗಿಫ್ಟ್ ನೀಡಿದೆ. ಹುಬ್ಬಳ್ಳಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷರಾಗಿ ಅಜ್ಜಂಪೀರ್ ಖಾದ್ರಿ ಅವರನ್ನು ಕಾಂಗ್ರೆಸ್ ನೇಮಕ ಮಾಡಿದೆ.
ಶಿಗ್ಗಾಂವಿ ಉಪಚುನಾವಣೆಯಿಂದ ಅನರ್ಹಗೊಂಡಿದ್ದ ಖಾದ್ರಿ ಪಕ್ಷೇತರರಾಗಿ ಉಮೇದುವಾರಿಕೆ ಸಲ್ಲಿಸಿದ್ದರು. ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಜಮೀರ್ ಅವರು ಖಾದ್ರಿ ಅವರಿಗೆ ಸ್ಥಿತಿಗತಿ ಸುಧಾರಿಸುವ ಭರವಸೆ ನೀಡಿ ನಾಮಪತ್ರ ಹಿಂಪಡೆಯುವುದಾಗಿ ಸೂಚಿಸಿದ್ದರು. ನಾಮಪತ್ರ ಹಿಂಪಡೆದು ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್‌ಗೆ ಬೆಂಬಲ ಸೂಚಿಸಿದ್ದರು.
ಇದೀಗ ಕೊಟ್ಟ ಭರವಸೆಯಂತೆ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತಕ್ಕೆ ಅಧ್ಯಕ್ಷರನ್ನಾಗಿ ನೇಮಿಸಿ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.