ಹೊಸದಿಗಂತ ಡಿಜಿಟಲ್ ಡೆಸ್ಕ್:
ಹೊಸ ವರ್ಷದ ಮೊದಲ ದಿನವೇ ಸಿಎಂ ಸಿದ್ದರಾಮಯ್ಯ ಪವರ್ ಫುಲ್ ಸಂದೇಶ ಕಳುಹಿಸಿ ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್ ಕೊಟ್ಟಿದ್ದಾರೆ. ನಾನೇ ಈ ಬಾರಿ ಬಜೆಟ್ ಮಂಡನೆ ಮಾಡುತ್ತೇನೆ. ಬಜೆಟ್ ಸಿದ್ದತೆ ಈ ತಿಂಗಳಿನಿಂದ ಶುರು ಮಾಡುವುದಾಗಿ ಹೇಳಿದ್ದಾರೆ.
ಇಂದು ವಿಧಾನಸೌಧಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರನ್ನು ಅಧಿಕಾರಿಗಳು ಸಮ್ಮೇಳನ ಸಭಾಂಗಣದಲ್ಲಿ ಭೇಟಿಯಾಗಿ ಹೊಸ ವರ್ಷದ ಶುಭಾಶಯ ಕೋರಿದರು. ಸರ್ಕಾರದ ಅಪರ ಕಾರ್ಯದರ್ಶಿಗಳು, ಕಾರ್ಯದರ್ಶಿ, ಬೆಂಗಳೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಐಜಿಪಿಸಿಸಿಎಫ್ ಹಾಗೂ ಪೊಲೀಸ್ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಂದ ಸಿಎಂ ಭೇಟಿಯಾಗಿ ಶುಭ ಹಾರೈಸಿದರು.

