ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮಾನವ- ಆನೆ ಸಂಘರ್ಷ ತಡೆಯಲು ಸಿದ್ದರಾಮಯ್ಯ ಸರ್ಕಾರ ಯೋಜನೆ ರೂಪಿಸಿದೆ.
150 ಕಿಲೋಮೀಟರ್ ವ್ಯಾಪ್ತಿಯಲ್ಲಿ ರೈಲ್ವೆ ಬ್ಯಾರಿಕೇಡ್ ನಿರ್ಮಿಸಲು 60 ಕೋಟಿ, ಭದ್ರಾ ಹುಲಿ ಸಂರಕ್ಷಿತ ಪ್ರದೇಶದ 20 ಚದರ ಕಿಲೋಮೀಟರ್ ವ್ಯಾಪ್ತಿಯಲ್ಲಿ ಸಾಫ್ಟ್ ರಿಲೀಸ್ ಕೇಂದ್ರ ಸ್ಥಾಪನೆಗೆ 20 ಕೋಟಿ ರೂಪಾಯಿಗಳನ್ನು ಬಜೆಟ್ನಲ್ಲಿ ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವನ್ಯಜೀವಿಗಳ ದಾಳಿಯಿಂದ ಆಗುವ ಮಾನವ ಪ್ರಾಣ ಹಾನಿ ಪ್ರಕರಣಗಳಲ್ಲಿ ನೀಡುವ ಪರಿಹಾರ ಮೊತ್ತವನ್ನು 15 ರಿಂದ 20 ಲಕ್ಷ ರು.ಗಳಿಗೆ ಹೆಚ್ಚಳ ಮಾಡಲಾಗಿದೆ. ಕಾಡಾನೆ, ಚಿರತೆ ಹಾವಳಿ ನಿಯಂತ್ರಣಕ್ಕಾಗಿ ಈಗಾಗಲೇ ಎಂಟು ಆನೆ ಕಾರ್ಯಪಡೆ ಹಾಗೂ ಎರಡು ಚಿರತೆ ಕಾರ್ಯಪಡೆ ರಚನೆ ಮಾಡಿದ್ದು, ಈ ಕಾರ್ಯಪಡೆಗಳನ್ನು ಮುಂದುವರೆಸುವುದಕ್ಕಾಗಿ 17 ಕೋಟಿ ರು.ಗಳ ನಿಗದಿ ಮಾಡಲಾಗಿದೆ.