ಹೊಸದಿಂಗತ ಡಿಜಿಟಲ್ ಡೆಸ್ಕ್:
ರಾಜ್ಯಾದ್ಯಂತ ವಿದ್ಯುತ್ ದರ ಹೆಚ್ಚಳದ ವಿರುದ್ಧ ಜನರು ಸಿಡಿದೆದ್ದಿದ್ದಾರೆ. ಎರಡು ಮೂರು ತಿಂಗಳ ಬಿಲ್ ಒಮ್ಮೆಲೆ ಬಂದಿದ್ದು ಕಂಡು ಬೆಚ್ಚಿ ಬಿದ್ದಿದ್ದಾರೆ. ಹೀಗಾಗಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ನಾವು ವಿದ್ಯುತ್ ದರ ಹೆಚ್ಚಳ ಮಾಡಿಲ್ಲ. ಮಾಡಿದ್ದೇವೆ ಎಂಬುದು ಸುಳ್ಳು ಎಂದು ಸ್ಪಷ್ಟನೆ ನೀಡಿದ್ದಾರೆ.
ಇಂದು ವಿಧಾನಸೌಧದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದಂತ ಅವರು, ವಿದ್ಯುತ್ ದರ ಹೆಚ್ಚಿಸಿದ್ದಾರೆ ಎಂಬುದಾಗಿ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ನಮ್ಮ ಸರ್ಕಾರ ವಿದ್ಯುತ್ ದರ ಹೆಚ್ಚಳ ಮಾಡಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
ವಿದ್ಯುತ್ ದರ ಹೆಚ್ಚಳದ ಬಗ್ಗೆ ಏಪ್ರಿಲ್ 1ರಂದು ತೀರ್ಮಾನವಾಗಿತ್ತು. ಅದನ್ನು ನಮ್ಮ ಸರ್ಕಾರ ಅಸ್ಥಿತ್ವಕ್ಕೆ ಬರುವ ಮುನ್ನವೇ ಚುನಾವಣಾ ನೀತಿ ಸಂಹಿತೆ ಮುಕ್ತಾಯದ ಬೆನ್ನಲ್ಲೇ ಜಾರಿಗೊಳಿಸಲಾಗಿದೆ ಎಂಬುದಾಗಿ ತಿಳಿಸಿದರು.