ಹೊಸದಿಗಂತ ಡಿಜಿಟಲ್ ಡೆಸ್ಕ್:
ರೈತರಿಗೆ (Farmers) ಸರ್ಕಾರ ಗುಡ್‌ನ್ಯೂಸ್ ನೀಡಿದ್ದು , ಸಹಕಾರಿ ಸಾಲದ (Cooperative Bank Loans) ಮೇಲಿನ ಬಡ್ಡಿಯನ್ನು (Interest) ಮನ್ನಾ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ (CM Siddaramaiah) ಘೋಷಣೆ ಮಾಡಿದ್ದಾರೆ.
ಮಧ್ಯಮ ಅವಧಿ, ದೀರ್ಘಾವಧಿ ಸಾಲ ಕಟ್ಟಿದರೆ ಅದರ ಮೇಲಿನ ಬಡ್ಡಿಯನ್ನು ಪೂರ್ಣವಾಗಿ ಮನ್ನಾ ಮಾಡಲಾಗುವುದು.. ಬಡ್ಡಿ ಮನ್ನಾ ಅವಧಿಯೊಳಗೆ ಸಾಲ ಮರುಪಾವತಿ ಮಾಡಿದ ರೈತರಿಗೆ ಮಾತ್ರ ಅನ್ವಯವಾಗುತ್ತದೆ ಎಂದು ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿರುವ ಅವರು , ಸಹಕಾರ ಬ್ಯಾಂಕುಗಳಲ್ಲಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಅಸಲನ್ನು ಕಟ್ಟಿದರೆ ಸಂಪೂರ್ಣ ಬಡ್ಡಿಯನ್ನು ಮನ್ನಾ ಮಾಡಲಾಗುವುದು ಎಂದು ನಮ್ಮ ಸರ್ಕಾರ ತೀರ್ಮಾನಿಸಿದೆ. ಇದರಿಂದ ಸಾಲಮನ್ನಾ ಮಾಡುವ ಕುರಿತು ನಾವು ನಮ್ಮ ಪ್ರಣಾಳಿಕೆಯಲ್ಲಿ ಹೇಳಿಲ್ಲ.